ಜನ ಮನದ ನಾಡಿ ಮಿಡಿತ

Advertisement

ಮಕ್ಕಳಲ್ಲಿ ಕಾಣಿಸಿಕೊಳ್ಳುವ ದೃಷ್ಟಿದೋಷದ ಬಗ್ಗೆ ಕಾಳಜಿ ವಹಿಸಿ: ಅಗರಿ ರಾಘವೇಂದ್ರ ರಾವ್

ಮುಲ್ಕಿ: ಸಂಚಾರಿ ಕಣ್ಣಿನ ಘಟಕ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್, ಪಡುಪಣಂಬೂರು ಗ್ರಾಮ ಪಂಚಾಯತ್ , ನೆಹರು ಯುವ ಕೇಂದ್ರ ಮಂಗಳೂರು ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)ತೋಕೂರು ,ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಜಂಟಿ ಆಶ್ರಯದಲ್ಲಿ ತೋಕೂರಿನ ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ನಡೆದಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಗರಿ ರಾಘವೇಂದ್ರ ರಾವ್ ರವರು ಮಾತಾನಾಡಿ, ಮಕ್ಕಳನ್ನು ಮೊಬೈಲ್ ನಿಂದ ದೂರವಿರಿಸಿ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿ ಅವರನ್ನು ದೃಷ್ಟಿ ದೋಷದಿಂದ ದೂರವಿರಿಸಿ ಅವರ ಕಣ್ಣಿನ ಆರೋಗ್ಯ ಕಾಪಾಡುವುದು ತಾಯಂದಿರ ಕರ್ತವ್ಯವಾಗಿದೆ ಎಂದರು. ಬಳಿಕ ಅನಿಲ್ ರಾಮಾನುಜನ್ ಹಾಗೂ ಪದ್ಮ ಇವರು ಅಂಗಾಂಗ ದಾನ ಹಾಗೂ ನೇತ್ರದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದ್ರು.

76 ಮಂದಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು, 62 ಮಂದಿಗೆ ಮಹಿಳಾ ಮಂಡಲದ ವತಿಯಿಂದ ಉಚಿತವಾಗಿ ಓದುವ ಕನ್ನಡಕವನ್ನು ವಿತರಣೆ ಮಾಡಲಾಗಿದೆ. ಏಳು ಕಣ್ಣಿನ ಪೊರೆ ಉಳ್ಳವರನ್ನು ಪತ್ತೆ ಮಾಡಿ ಅವರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಉಚಿತ ಸೇವೆ ಪಡೆಯಲು ಶಿಫಾರಸ್ಸಿನ ದಿನಾಂಕ ನಿಗದಿ ಮಾಡಿದ್ದಾರೆ. ಇನ್ನೂ ಸಂದರ್ಭದಲ್ಲಿ ಮಹಿಳಾಮಂಡಲದ ಅಧ್ಯಕ್ಷೆ ಅನುಪಮಾ ಎ ರಾವ್, ಪವಿತ್ರ ಸುನಿಲ್, ವಿನೋದ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!