ಜನ ಮನದ ನಾಡಿ ಮಿಡಿತ

Advertisement

ಡಾ. ಶಂಸುಲ್ ಇಸ್ಲಾಂ ಉಪನ್ಯಾಸ ಖಂಡಿಸಿ, ಮಂಗಳೂರು ವಿ.ವಿಯಲ್ಲಿ ಎಬಿವಿಪಿ‌‌ ಪ್ರತಿಭಟನೆ

ಮಂಗಳೂರು; ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಉಪಾನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಇದನ್ನ ವಿರೋಧಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಕಾಲೇಜಿನಲ್ಲಿ ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 – ಜಂಟಿ ಬಲಿದಾನಗಳು , ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಆದರೆ ವಿದ್ಯಾರ್ಥಿಗಳು ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ್ದಾರೆ. 

ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ. ಶಂಸುಲ್‌ ಇಸ್ಲಾಂ ಅವರು ಉಪನ್ಯಾಸ ನೀಡಲಿದ್ದಾರೆ  ಎಂಬ ಕಾರಣಕ್ಕೆ ಎಬಿವಿಪಿ‌‌ ಭಾರೀ ವಿರೋಧ ವ್ಯಕ್ತಪಡಿಸಿದೆ. ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ, ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನಲೆ ಕಾರ್ಯಕ್ರಮ‌ ನಡೆಯದಂತೆ ತಡೆಯಲು ಎಬಿವಿಪಿ ಯೋಜನೆ ರೂಪಿಸಿದೆ.

ಅದಲ್ಲದೇ ಆರ್ ಎಸ್ ಎಸ್ ನ ತೀವ್ರ ವಿರೋಧಿ ಆಗಿರುವ ಡಾ ಶಂಸುಲ್ ಇಸ್ಲಾಂ ರವರು ಕಾಲೇಜಿನಲ್ಲಿ ಉಪನ್ಯಾಸ ನೀಡಲು ಅರ್ಹರಲ್ಲ ಎಂಬ ಮನೋಭಾವನೆ ವಿದ್ಯಾರ್ಥಿಗಳದ್ದಾಗಿದೆ.  ಈ ಹಿನ್ನಲೆ ವಿದ್ಯಾರ್ಥಿಗಳು ಗೋ ಬ್ಯಾಕ್ ಶಂಸುಲ್ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!