ಮಂಗಳೂರು; ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಉಪಾನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಇದನ್ನ ವಿರೋಧಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಕಾಲೇಜಿನಲ್ಲಿ ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 – ಜಂಟಿ ಬಲಿದಾನಗಳು , ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಆದರೆ ವಿದ್ಯಾರ್ಥಿಗಳು ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ್ದಾರೆ.
ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ. ಶಂಸುಲ್ ಇಸ್ಲಾಂ ಅವರು ಉಪನ್ಯಾಸ ನೀಡಲಿದ್ದಾರೆ ಎಂಬ ಕಾರಣಕ್ಕೆ ಎಬಿವಿಪಿ ಭಾರೀ ವಿರೋಧ ವ್ಯಕ್ತಪಡಿಸಿದೆ. ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ, ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನಲೆ ಕಾರ್ಯಕ್ರಮ ನಡೆಯದಂತೆ ತಡೆಯಲು ಎಬಿವಿಪಿ ಯೋಜನೆ ರೂಪಿಸಿದೆ.
ಅದಲ್ಲದೇ ಆರ್ ಎಸ್ ಎಸ್ ನ ತೀವ್ರ ವಿರೋಧಿ ಆಗಿರುವ ಡಾ ಶಂಸುಲ್ ಇಸ್ಲಾಂ ರವರು ಕಾಲೇಜಿನಲ್ಲಿ ಉಪನ್ಯಾಸ ನೀಡಲು ಅರ್ಹರಲ್ಲ ಎಂಬ ಮನೋಭಾವನೆ ವಿದ್ಯಾರ್ಥಿಗಳದ್ದಾಗಿದೆ. ಈ ಹಿನ್ನಲೆ ವಿದ್ಯಾರ್ಥಿಗಳು ಗೋ ಬ್ಯಾಕ್ ಶಂಸುಲ್ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…