ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಮೈಸೂರು ವಿವಿಯ ಕ್ರಾಫರ್ಡ್ ಹಾಲ್ ಕಚೇರಿಯಲ್ಲಿ ನಡೆದಿದೆ.

ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರು ವೆಂಕಟೇಶ್ ಎಂಬುವವರು ವಿದ್ಯಾರ್ಥಿ ಮೇಲೆ ದೈಹಿಕವಾಗಿ ಹಲ್ಲೆ ಮಾಡಿ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರ ವಿರುದ್ಧ ಠಾಣೆಯಲ್ಲಿ ದೂರನ್ನು ನೀಡಿದರು ಸಹ ಪೊಲೀಸರು ನಿರ್ಲಕ್ಷ್ಯ ತೋರಿಸಿದ್ದರು.
ಹೀಗಾಗಿ ಮನನೊಂದ ವಿದ್ಯಾರ್ಥಿ ಗಗನ್ ಮಾತ್ರೆ ಸೇವಿಸಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಗಗನ್ನನ್ನು ಒಂಟಿಕೊಪ್ಪದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಖಾಸಗಿ ಆಸ್ಪತ್ರೆಗೆ ದಾಖಲಾದ ಗಗನ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.



