ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳ ಆವರಣದಲ್ಲಿ ನಡೆದಿದೆ.
ಒಟ್ಟು 48 ಬೈಠಕ್‍ಗಳು ನಡೆದಿದ್ದು, ಅದಾಲತ್‍ನಲ್ಲಿ ಒಟ್ಟು 21,763 ಪ್ರಕರಣಗಳು ಪರಿಗಣಿಸಲಾಗಿತ್ತು; ಅದರಲ್ಲಿ 14,840 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 17,97,64,778 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದ್ದಾರೆ.
ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…