ಜನ ಮನದ ನಾಡಿ ಮಿಡಿತ

Advertisement

ಬಿ.ಕೆ ಹರಿಪಸ್ರಾದ್ ವಿರುದ್ಧ ಅಸಮಾಧಾನ ಹೊರ ಹಾಕಿದ ಸಿದ್ದರಾಮಯ್ಯ

ಪದೇ ಪದೇ ಬಿ.ಕೆ ಹರಿಪ್ರಸಾದ್ ಅವರು ವೈಯಕ್ತಿಕವಾಗಿ ಟೀಕೆ ಮಾಡುವ ಮೂಲಕ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ನಡೆದ ಈಡಿಗ ಸಮುದಾಯದ ಸಭೆಯಲ್ಲಿ ಬಿ.ಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ರು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ವೈಯಕ್ತಿಕವಾಗಿ ಟೀಕಿಸುತ್ತಿದ್ದಾರೆ. ಬಹಿರಂಗವಾಗಿ ಹೇಳಿಕೆಗಳನ್ನ ನೀಡುವ ಮೂಲಕ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿದ್ದಾರೆ.ಅಲ್ಲದೇ ಎಐಸಿಸಿ ನಾಯಕರಿಗೆ ದೂರವಾಣಿ ಕರೆ ಮಾಡುವ ಮೂಲಕ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣ್​ದೀಪ್​ ಸಿಂಗ್​ ಸುರ್ಜೇವಾಲ ಅವರಿಗೆ ಕರೆ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಬಹಿರಂಗ ವೇದಿಕೆಗಳಲ್ಲಿ ನನ್ನನ್ನೇ ಟಾರ್ಗೆಟ್ ಮಾಡಿ ಮಾತನ್ನಾಡುತ್ತಿರುವುದು ಸರಿಯಲ್ಲ. ಏನೇ ಅಸಮಾಧಾನ ಇದ್ದರೂ ಪಕ್ಷದ ವೇದಿಕೆಗಳಲ್ಲಿ ಮಾತನಾಡಬೇಕು. ಅದನ್ನ ಬಿಟ್ಟು ಮಾಧ್ಯಮಗಳ ಮುಂದೆ ಹೀಗೆ ಹೇಳಿಕೆ ನೀಡುವುದು ಸರಿಯಲ್ಲ. ಹಿರಿಯ ನಾಯಕರು ಎನಿಸಿಕೊಂಡವರೇ ಹೀಗೆ ಮಾತನ್ನಾಡಿದ್ರೆ ಹೇಗೆ. ಮೊದಲು ಹೇಳಿಕೆಗಳನ್ನ ನೀಡದಂತೆ ಸ್ಪಷ್ಟ ಸೂಚನೆ ಕೊಡಿ ಎಂದು ಕೋಪದಿಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!