ಪದೇ ಪದೇ ಬಿ.ಕೆ ಹರಿಪ್ರಸಾದ್ ಅವರು ವೈಯಕ್ತಿಕವಾಗಿ ಟೀಕೆ ಮಾಡುವ ಮೂಲಕ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ನಡೆದ ಈಡಿಗ ಸಮುದಾಯದ ಸಭೆಯಲ್ಲಿ ಬಿ.ಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ರು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ವೈಯಕ್ತಿಕವಾಗಿ ಟೀಕಿಸುತ್ತಿದ್ದಾರೆ. ಬಹಿರಂಗವಾಗಿ ಹೇಳಿಕೆಗಳನ್ನ ನೀಡುವ ಮೂಲಕ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿದ್ದಾರೆ.ಅಲ್ಲದೇ ಎಐಸಿಸಿ ನಾಯಕರಿಗೆ ದೂರವಾಣಿ ಕರೆ ಮಾಡುವ ಮೂಲಕ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣ್ದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಕರೆ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
ಬಹಿರಂಗ ವೇದಿಕೆಗಳಲ್ಲಿ ನನ್ನನ್ನೇ ಟಾರ್ಗೆಟ್ ಮಾಡಿ ಮಾತನ್ನಾಡುತ್ತಿರುವುದು ಸರಿಯಲ್ಲ. ಏನೇ ಅಸಮಾಧಾನ ಇದ್ದರೂ ಪಕ್ಷದ ವೇದಿಕೆಗಳಲ್ಲಿ ಮಾತನಾಡಬೇಕು. ಅದನ್ನ ಬಿಟ್ಟು ಮಾಧ್ಯಮಗಳ ಮುಂದೆ ಹೀಗೆ ಹೇಳಿಕೆ ನೀಡುವುದು ಸರಿಯಲ್ಲ. ಹಿರಿಯ ನಾಯಕರು ಎನಿಸಿಕೊಂಡವರೇ ಹೀಗೆ ಮಾತನ್ನಾಡಿದ್ರೆ ಹೇಗೆ. ಮೊದಲು ಹೇಳಿಕೆಗಳನ್ನ ನೀಡದಂತೆ ಸ್ಪಷ್ಟ ಸೂಚನೆ ಕೊಡಿ ಎಂದು ಕೋಪದಿಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…