ಬಂಟ್ವಾಳ: ಹಿಂಬದಿಯಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಕಲ್ಲಡ್ಕ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮಹಾಲಿಂಗ್ ಭಟ್ ಎಂಬವರ ಖಾಸಗಿ ಕಾರಿಗೆ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಘನಗಾತ್ರದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಬಹುಭಾಗ ಜಖಂಗೊಂಡಿದೆಯಲ್ಲದೆ ಎರಡು ಟಯರ್ ಗಳು ಒಡೆದುಹೋಗಿದೆ. ಅದೃಷ್ಟವಶಾತ್ ಕಾರಿನ ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ.
ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಲಾರಿ ಗುದ್ದಿದೆ. ಕಲ್ಲಡ್ಕ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು ಅಮೆ ನಡಿಗೆಯಲ್ಲಿ ಪ್ರಯಾಣ ಮಾಡಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿಯೂ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದರೆ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದೆ.
ಕಂಪೆನಿಗೆ ಸೇರಿದ ವಾಹನಗಳು ಇದೇ ರೀತಿ ಅನೇಕ ಬಾರಿ ಅಪಘಾತಕ್ಕೆ ಕಾರಣವಾಗಿದೆ. ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯನ್ನು ಮಾಡುತ್ತಿರುವ ಬಗ್ಗೆ ಮತ್ತು ಅದರಿಂದಾಗುವ ಪರಿಣಾಮಗಳ ಬಗ್ಗೆ ಇತ್ತೀಚಿಗೆ ಸಂಸದರ ಬಳಿ ಸಾರ್ವಜನಿಕರು ದೂರಿದ್ದರು.
ಕಂಪೆನಿ ಮಾತ್ರ ಯಾರ ಮಾತಿಗೂ ಬೆಲೆ ಕೊಡದೆ ಮೌನವಾಗಿ ಉಳಿದುಬಿಟ್ಟಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…