ಬಂಟ್ವಾಳ: ಹಿಂಬದಿಯಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಕಲ್ಲಡ್ಕ ಎಂಬಲ್ಲಿ ನಿನ್ನೆ ಮಧ್ಯಾಹ್ನ ವೇಳೆ ನಡೆದಿದೆ. ಮಹಾಲಿಂಗ್ ಭಟ್ ಎಂಬವರ ಖಾಸಗಿ ಕಾರಿಗೆ ಕೆ.ಎನ್.ಆರ್.ಸಿ. ಕಂಪೆನಿಗೆ ಸೇರಿದ ಘನಗಾತ್ರದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಬಹುಭಾಗ ಜಖಂಗೊಂಡಿದೆಯಲ್ಲದೆ ಎರಡು ಟಯರ್ ಗಳು ಒಡೆದುಹೋಗಿದೆ. ಅದೃಷ್ಟವಶಾತ್ ಕಾರಿನ ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ. ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಲಾರಿ ಗುದ್ದಿದೆ.
ಕಲ್ಲಡ್ಕ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು ಅಮೆ ನಡಿಗೆಯಲ್ಲಿ ಪ್ರಯಾಣ ಮಾಡಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿಯೂ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದರೆ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದೆ.
ಕಂಪೆನಿಗೆ ಸೇರಿದ ವಾಹನಗಳು ಇದೇ ರೀತಿ ಅನೇಕ ಬಾರಿ ಅಪಘಾತಕ್ಕೆ ಕಾರಣವಾಗಿದೆ. ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯನ್ನು ಮಾಡುತ್ತಿರುವ ಬಗ್ಗೆ ಮತ್ತು ಅದರಿಂದಾಗುವ ಪರಿಣಾಮಗಳ ಬಗ್ಗೆ ಇತ್ತೀಚಿಗೆ ಸಂಸದರ ಬಳಿ ಸಾರ್ವಜನಿಕರು ದೂರಿದ್ದರು. ಕಂಪೆನಿ ಮಾತ್ರ ಯಾರ ಮಾತಿಗೂ ಬೆಲೆ ಕೊಡದೆ ಮೌನವಾಗಿ ಉಳಿದುಬಿಟ್ಟಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…