ಕಿನ್ನಿಗೋಳಿ: ಕರ್ತವ್ಯವನ್ನು ಮಾಡುವವರನ್ನು ದೇವರು ಯಾವಾಗಲು ಹರಸುತ್ತಾನೆ ಅದರಂತೆ ಐಕಳ ಹರಿಶ್ ಶೆಟ್ಟಿಯವರು ಜಾಗತಿಕ ಬಂಟರ ಸಂಘದ ಅಧ್ಯಕ್ಷರಾಗಿದ್ದುಕೊಂಡು ಅತ್ಯುತ್ತಮ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಇಂತಹ ಕೆಲಸಕ್ಕೆ ದೇವರ ಆಶೀರ್ವಾದ ಇದೆ ಎಂದು ಕಟೀಲು ದೇವಳದ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ನಡೆದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅಕ್ಟೋಬರ್ 28 ಮತ್ತು 29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮಿಲನದ ಪ್ರಯುಕ್ತ ನಡೆಯಲಿರುವ ಸಾಂಸ್ಕೃತಿಕ ವೈಭವದ ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಆಶೀರ್ವಾಚನ ನೀಡಿ ಮಾತನಾಡಿ ಜಾಗತಿಕ ಬಂಟರ ಸಂಘ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತಿದೆ. ನಮ್ಮ ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರ ಕೊಡುವ ಕೆಲಸ ನಡೆಯುತ್ತಿದ್ದು ಇದು ನಿರಂತರವಾಗಿರಲಿ, ಸತ್ಕರ್ಮಗಳ ಮೂಲಕ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದರು.

ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ ಜಾಗತಿಕ ಬಂಟರ ಸಂಘ ಸುಮಾರು 150 ಬಂಟರ ಸಂಘಗಳ ಮಾತೃ ಸಂಘವಾಗಿದ್ದು ಇದರ ನೇತೃತ್ವದಲ್ಲಿ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಬಂಟರ ಸಮ್ಮಿಲನ ನಡೆಯಲಿದ್ದು ಎಲ್ಲಾ ಬಂಟರ ಸಂಘಗಳ ಅಧ್ಯಕ್ಷರು ಮತ್ತು ಸರ್ವಸದಸ್ಯರು ಆಗಮಿಸಲಿದ್ದಾರೆ, ಸಾಂಸ್ಕೃತಿಕ ವೈಭವದ ಸಂಚಾಲಕರಾಗಿ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಜವಾಬ್ದಾರಿಯನ್ನು ಮತ್ತು ಕ್ರೀಡಾ ಕೂಟದ ಸಂಚಾಲಕರಾಗಿ ಗಿರೀಶ್ ಶೆಟ್ಟಿ ತೆಳ್ಳಾರ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ನಳಿನ ಭೋಜ ಶೆಟ್ಟಿ ಕ್ರೀಡಾ ವೇದಿಕೆ ಮತ್ತು ಕನ್ಯಾನ ಸದಾಶಿವ ಶೆಟ್ಟಿ ಸಾಂಸ್ಕೃತಿಕ ವೇದಿಕೆಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ರಾಜಕೀಯ ಮುಖಂಡರು ಸಿನಿಮಾ ತಾರೆಯರು ಮತ್ತು ವಿವಿಧ ರಂಗದ ಸಾಧಕರು ಬಾಗವಹಿಸಲಿದ್ದು ಸಾವಿರಾರು ಜನ ಸೇರುವ ನೀರೀಕ್ಷೆ ಇದೆ ಎಂದರು. ಬಿಡುಗಡೆ ಸಮಾರಂಭಕ್ಕೂ ಮುಂಚೆ ಕಟೀಲು ದೇವಳದಲ್ಲಿ ಕಟೀಲು ದೇವಳದ ಪ್ರಧಾನ ಅರ್ಚಕ ವೆಂಕಟರಮಣ ಆಸ್ರಣ್ಣ ಅವರ ಮುಂದಾಳ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಬಂಟ್ವಾಳದ ಬಂಟರ ಸಂಘ ಅಧ್ಯಕ್ಷರು ಸಾಂಸ್ಕೃತಿಕ ವೈಭವದ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷರು ಪುರುಷೋತ್ತಮ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಶರತ್ ಶೆಟ್ಟಿ, ಸಾಯಿನಾಥ ಶೆಟ್ಟಿ, ಎಕ್ಕಾರು ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಎಕ್ಕಾರು, ಸುರತ್ಕಲ್ ಬಂಟರ ಸಂಘದ ಸುಧಾಕರ ಪೂಂಜಾ, ಬೆಳ್ಮಾಣ್ ಬಂಟರ ಸಂಘದ ಸತೀಶ್ ಶೆಟ್ಟಿ, ರೂಪಾರಾಣಿ ಶೆಟ್ಟಿ, ಪ್ರಮೀಳಾ ಶೆಟ್ಟಿ, ಭಾಗ್ಯರಾಜ್, ಸಾಹಿಲ್ ರೈ, ಅಭಿಷೇಕ್, ರವಿರಾಜ್ ಶೆಟ್ಟಿ ಜತ್ತಬೆಟ್ಟು, ಜಗನ್ನಾಥ ಶೆಟ್ಟಿ ಬಾಳ, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.



