ಬಂಟ್ವಾಳ ತಾಲೂಕಿನ ಪುಣಚದ ದೇವರಗುಂಡಿ ಮಣಿಲಾ ಕೂರೇಲು ಸ್ಮಶಾನ ರಸ್ತೆ ಮತ್ತೆ ಕುಸಿದು ಬಿದ್ದು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಖಾಸಗಿ ಜಮೀನಿನವರ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಬದಿ ಕುಸಿಯುತ್ತಿದ್ದು ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಕಷ್ಟು ಬಾರಿ ದೂರು ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಗೆ ತೆರಳುವ ಮಕ್ಕಳು, ಮಹಿಳೆಯರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಇದೆ.


ಕೆಲ ವರ್ಷಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ್ದ ಸಹಾಯಕ ಕಮೀಶನ್ ರವರು ಮಣ್ಣು ತೆಗೆದ ಜಾಗಕ್ಕೆ ಮಣ್ಣು ಹಾಕಿ ಕಲ್ಲುಕಟ್ಟಿ ಕೊಡುವಂತೆ ಸೂಚಿಸಿದ್ದರು. ಅದರಂತೆ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡಿದ್ದರು. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದೆ ಇರುವುದರಿಂದ ರಸ್ತೆಯ ಬದಿ ಮತ್ತೆ ಮತ್ತೆ ಜರಿದು ಬಿದ್ದು ಅನಾಹುತಗಳಿಗೆ ಅವಕಾಶವಾಗುತ್ತಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.



