ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ವಾಲ್ಪಾಡಿ ಮಾಡದಂಗಡಿ ಶಾಲಾ ಶಿಕ್ಷಕಿ ವಾಣಿಶ್ರೀ ಅವರನ್ನು ಎಸ್, ಡಿ, ಎಂ, ಸಿ ಹಳೆ ವಿದ್ಯಾರ್ಥಿ ಸಂಘ, ಗ್ರಾಮೋತ್ಸವ ಸಮಿತಿ ಹಾಗೂ ಫ್ರೆಂಡ್ಸ್ ವಾಲ್ಪಾಡಿ ವತಿಯಿಂದ ಎಲ್ಲ ಸಂಘಟನೆಗಳ ಸದಸ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಲಾಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಅವರು ವಾಣಿಶ್ರೀ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ವಾಲ್ಪಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಅವರು ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಶ್ರೀಧರ ಬಂಗೇರ, ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ಉದ್ಯಮಿಗಳಾದ ವಿಘ್ನೇಶ್ ಆಚಾರ್ಯ, ಸಂತೋಷ್ ಅಮಣಿ ಅತಿಥಿಗಳಾಗಿ ಭಾಗವಹಿಸಿದ್ದರು.
ಎಸ್, ಡಿ,ಎಂ,ಸಿ ಮಾಜಿ ಅಧ್ಯಕ್ಷರಾದ ಸುಧಾಕರ ಸುವರ್ಣ, ಪ್ರಭಾವತಿ, ಇಬ್ರಾಹಿಂ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಆನಂದ ,ಮಹಿಳಾ ಮಂಡಲ ಅಧ್ಯಕ್ಷೆ ಜೆಸಿಂತಾ ಫೆರ್ನಾಂಡೀಸ್, ಅಂಗನವಾಡಿ ಶಿಕ್ಷಕಿ ಸುನೀತಾ ವೇದಿಕೆಯಲ್ಲಿದ್ದರು.
ಸಹಶಿಕ್ಷಕಿ ರಶ್ಮಿ ಎಂ.ಎಸ್. ಸ್ವಾಗತಿಸಿ ವಾಣಿಶ್ರೀ ಅವರನ್ನು ಪರಿಚಯಿಸಿದರು. ಬಿಂದು ಕುಮಾರಿ ವಂದಿಸಿದರು.
ಎಸ್, ಡಿ,ಎಂ,ಸಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ನಿರೂಪಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…