ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಪಲ್ಟಿಯಾದ ಪರಿಣಾಮ ಒಂಬತ್ತು ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

ಮೂಡಡ್ಕದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಒಂಬತ್ತು ವಿದ್ಯಾರ್ಥಿಗಳನ್ನು ಕಲ್ಲೇರಿ ಕಡೆಯಿಂದ ಹೊತ್ತೊಯ್ಯುತ್ತಿದ್ದ ಆಟೋ ರಿಕ್ಷಾಕ್ಕೆ ದ್ವಿಚಕ್ರ ವಾಹನವೊಂದು ಹಠಾತ್ತನೆ ಅಡ್ಡಬಿದ್ದಿದೆ. ದ್ವಿಚಕ್ರ ವಾಹನ ಸವಾರನನ್ನು ರಕ್ಷಿಸಲು ಆಟೋ ರಿಕ್ಷಾ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿಯಾಗಿದೆ.
ಗಾಯಗೊಂಡ ಮಕ್ಕಳಿಗೆ ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
 
								



