ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು, ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ (ರಿ.) ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಬಡಗ ಎಕ್ಕಾರು ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ, ಸರಕಾರಿ ಪದವಿ ಪೂರ್ವ ಕಾಲೇಜು, ಪಡುಪಣಂಬೂರು ನ ನಿವೃತ್ತ ಆಂಗ್ಲ ಉಪನ್ಯಾಸಕರಾದ ಪ್ರೇಮನಾಥ ಶೆಟ್ಟಿಗಾರ್ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಪಣಂಬೂರು ಇಲ್ಲಿನ ನಿವೃತ್ತ ಮುಖ್ಯ ಶಿಕ್ಷಕಿ ರತಿ ವೈ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸರಕಾರಿ ಶಾಲೆ, ಟೀಚರ್ಸ್ ಎಜುಕೇಶನ್ ಮಂಗಳೂರು ಇಲ್ಲಿನ ಪ್ರಾಧ್ಯಾಪಕರಾದ ಓ. ಆರ್. ಪ್ರಕಾಶ್ ಇವರು , ಶಿಕ್ಷಕರ ತ್ಯಾಗ ಶ್ರಮವನ್ನು ಗುರುತಿಸಿ ಶಿಕ್ಷಕರ ದಿನಾಚರಣೆಯಂದು ಸನ್ಮಾನ ಮಾಡುತ್ತಿರುವುದು ಸಂಘ-ಸಂಸ್ಥೆಗಳ ಶ್ಲಾಘನೀಯ ಕಾರ್ಯ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಮತಿ ಯಶೋಧ ಪಿ ರಾವ್, ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಹೇಮನಾಥ ಅಮೀನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆ ಅನುಪಮಾ ಎ ರಾವ್ ಸ್ವಾಗತಿಸಿ, ಯುವಕ ಸಂಘದ ಅಧ್ಯಕ್ಷರಾದ ಶೇಖರ ಶೆಟ್ಟಿಗಾರ್ ವಂದಿಸಿದರು. ವಿನೋದ ಭಟ್ ಕಾರ್ಯಕ್ರಮ ನಿರೂಪಿಸಿದರು.



