ಜನ ಮನದ ನಾಡಿ ಮಿಡಿತ

Advertisement

ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ನಿರ್ಲಕ್ಷ್ಯ; ಬಸ್ಸಿನಿಂದ ಬಿದ್ದು ಮಹಿಳೆ ಸಾವು

ಮೂಡಬಿದಿರೆ: ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ನಿರ್ಲಕ್ಷ್ಯದಿಂದಾಗಿ ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಬಸ್ಸಿನಿಂದ ಬಿದ್ದು ತೀವೃ ತರಹದ ಗಾಯದಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೂರಿನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮಾರೂರು ಕುಂಟೋಡಿ ನಿವಾಸಿ ನೀಲಮ್ಮ (66ವ ) ದುರ್ಘಟನೆಯಲ್ಲಿ ಸಾವನ್ನಪ್ಪಿದವರು.


ನೀಲಮ್ಮ ಅವರು ಬಿಪಿ, ಶುಗರ್ ಚೆಕ್ ಮಾಡಲೆಂದು ತನ್ನ ಮೊಮ್ಮಗನ ಜತೆ ಮೂಡುಬಿದಿರೆ ಆಸ್ಪತ್ರೆಗೆಂದು ಸಾಯಿ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ಸಿಗೆ ಹತ್ತಿದರು. ಈ ಸಂದರ್ಭ ಬಸ್ಸಿನ ನಿರ್ವಾಹಕ ರೈಟ್ ಕೊಟ್ಟಿದ್ದರಿಂದ ಚಾಲಕ ಬಸ್ ಚಲಾಯಿಸಿದಾಗ ನೀಲಮ್ಮ ಅವರು ಆಯತಪ್ಪಿ ಬಸ್ಸಿನ ಕೆಳಗೆ ಬಿದ್ದಿದ್ದಾರೆ.


ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೂಡಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಬಸ್ಸಿನ ನಿರ್ವಾಹಕ ಅಶೋಕ್ ಮತ್ತು ಚಾಲಕ ಪ್ರಸನ್ನ ಎಂಬವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಜಾಮೀನಿನ ಮೇಲೆ ಇಬ್ಬರನ್ನೂ ಬಿಡುಗಡೆಗೊಳಿಸಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!