ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ನಿನ್ನೆ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ, ಈ ಹಿನ್ನಲೆ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಜೊತೆಗೆ ಗಗನ್ ಕಡೂರು, ಶ್ರೀಕಾಂತ್ ನಾಯಕ್, ಪ್ರಸಾದ್ ಎಂಬವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…