ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಆಗಮಿಸಿದ ಮಹಿಳಾ ಪ್ರಯಾಣಿಕರಿಂದ 1.684 ಕೆ.ಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 86,89,440 ರೂ. ಆಗಿದೆ. ಈಕೆ ಒಳಉಡುಪು ಹಾಗೂ ಸ್ಯಾನಿಟರಿ ಪ್ಯಾಡ್ನಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದಳು ಎಂಬುದು ತಿಳಿದು ಬಂದಿದೆ. ಮತ್ತೊಂದು ಪ್ರಕರಣದಲ್ಲೂ ದುಬೈನಿಂದ ಬಂದ ಒಬ್ಬ ಪ್ರಯಾಣಿಕನಿಂದ 964 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 49.74,240 ರೂ ಆಗಿದೆ.
ದುಬೈನಿಂದ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಪ್ರಯಾಣಿಕರೊಬ್ಬರು ಚಿನ್ನದ ಪುಡಿಯನ್ನು ರಟ್ಟಿನ ಪೆಟ್ಟಿಗೆಯಲ್ಲಿ ಇಟ್ಟು ನಾಲ್ಕು ಕಾರ್ಬನ್ ಪೇಪರ್‌ಗಳಲ್ಲಿ ಸುತ್ತಿ ಕಳ್ಳಸಾಗಣೆ ಮಾಡಿದ್ದಾರೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
14.50 ಲಕ್ಷ ಮೌಲ್ಯದ 242 ಗ್ರಾಂ ಚಿನ್ನದ ಪುಡಿಯನ್ನು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.




