ಬೆಳ್ತಂಗಡಿ : ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದರು.
ಈ ಕುರಿತು ತೀರ್ಪು ನೀಡಿದ ಹೈಕೋರ್ಟ್ ಸರಕಾರ ಅಥವಾ ಮೂಲ ದೂರುದಾರರು ಅಥವಾ ಸಂತ್ರಸ್ಥ ಕುಟುಂಬ ಮಾತ್ರ ಆರೋಪಿಯನ್ನ ದೋಷಮುಕ್ತಗೊಳಿಸಿದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿಲ್ಲಿ ಅವಕಾಶವಿದೆ. ತನಿಖಾಲೋಪದ ಅಂಶವನ್ನ ಮೇಲ್ಮನವಿಯಲ್ಲೇ ಪರಿಗಣಿಸಲು ಕಾನೂನಿಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಭೆ,ಸಮಾರಂಭ ,ಧರಣಿ ಹಾಗು ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ .ಆರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ ಕಾನೂನಿನ ಮಿತಿ ಒಳಗಡೆ ವ್ಯವಹರಿಸಬೇಕಾಗುತ್ತದೆ . ಸಂತ್ರಸ್ಥ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡಿ ಎಂದು ಸಲಹೆ ನೀಡಿದ ವಿಭಾಗೀಯ ಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿಗೊಳಿಸಿತ್ತು.
ಸೌಜನ್ಯ ಪ್ರಕರಣದ ಮರು ತನಿಖೆಗೆ ಅಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ನವೀನ್ ಕುಮಾರ್ ನೆರಿಯ ಹಾಗೂ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಮುಖರು ಸೌಜನ್ಯ ಮನೆಗೆ ಭೇಟಿ ನೀಡಿ ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಂದರ್ಭ ಕೊರ್ಟ್ ನಿರ್ದೇಶಿಸಿದಂತೆ ಮರು ತನಿಖೆಗೆ ಸೌಜನ್ಯ ಕುಟುಂಬದವರೇ ಅರ್ಜಿ ಸಲ್ಲಿಸಬೇಕಾಗಿದ್ದು ಈ ವಿಚಾರವನ್ನು ತಿಳಿಸಿ ನ್ಯಾಯಾಂಗ ಹೋರಾಟ ಮತ್ತು ಸೌಜನ್ಯಳಿಗೆ ನ್ಯಾಯಕ್ಕಾಗಿ ತಮ್ಮ ಜೋತೆ ಇದ್ದೇವೆ ಎಂಬ ಭರವಸೆ ನೀಡಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕ,ಬಜರಂಗದಳ ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ.ನ್ಯಾಯವಾದಿ ಅನಿಲ್ ದಡ್ಡು,ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ,ರಮೇಶ್,ಮೋಹನ್ ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…