ನಕಲಿ RSS ಪ್ರಚಾರದ ವ್ಯಕ್ತಿಯನ್ನ ಸೃಷ್ಟಿಸಿರುವ ಆರೋಪದಡಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಗಗನ್ ಕಡೂರ್ ನನ್ನು ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿಗೆ ಟಿಕೆಟ್ ಕೊಡಿಸುತ್ತೇನೆ ಎಂಬ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗಗನ್ ಕಡೂರ್ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಗಗನ್ನನ್ನು ಪಕ್ಷದ ಸ್ಥಾನದಿಂದ ವಿಮುಕ್ತಿಗೊಳಿಸಿದ್ದಾರೆ.
ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಎಂಬವರಿಗೆ ಚೈತ್ರಾ ಕುಂದಾಪುರ 5 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಗಗನ್ ಕಡೂರ್ RSS ಹಿರಿಯ ಪ್ರಚಾರಕನೆಂದು ವಿಶ್ವನಾಥ್ ಎಂಬವರ ಹೆಸರನ್ನು ಸೃಷ್ಟಿಸಿ ಅವರ ಮೂಲಕ ಶಿಫಾರಸ್ಸು ಮಾಡೋದಾಗಿ ಭರವಸೆ ನೀಡಿದ್ದಾನೆ. ಎಂಬ ಮಾಹಿತಿ ಲಭ್ಯವಾಗಿದೆ. ಅದಲ್ಲದೇ ಈ ಖತರ್ನಾಕ್ ಚಿಕ್ಕಮಗಳೂರಲ್ಲಿ ವಿಶ್ವನಾಥ್ ಜೀ ಅಂತಾ ಬೇರೊಬ್ಬನನ್ನ ಭೇಟಿ ಮಾಡಿಸಿ ಮಹಾ ಮೋಸವನ್ನು ಮಾಡಿದ್ದಾನೆ. ಇದೀಗ ಆರೋಪಿಗಳು ಸಿಸಿಬಿ ಪೊಲೀಸರ ತೆಕ್ಕೆಗೆ ಬಿದ್ದಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.



