ಕೇರಳದಲ್ಲಿ ನಿಫಾ ವೈರಸ್ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ.
ನಗರದಲ್ಲಿ ಈಗಾಗಲೇ ಒಂದೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾರ್ಡ್ ಕ್ಲೀನಿಂಗ್ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಏರ್ಪೋರ್ಟ್ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.
ಇನ್ನೂ ನಿಫಾ ವೈರಸ್ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…