ಬಂಟ್ವಾಳ: ಅಮ್ಟಾಡಿ ಗ್ರಾಮಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (75) ಎಂಬವರು ನಾಪತ್ತೆಯಾಗಿದ್ದು, ಅವರ ಮೊಬೈಲ್ ವಾಲ್ಪಾಡಿಯ ಕೊಯಕ್ಕುಡೆ ಚಡಾವ್ ಎಂಬಲ್ಲಿ ಪತ್ತೆಯಾಗಿದೆ. ಪಂಚಾಯತ್ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಅವರ ನಾಪತ್ತೆ ಬಗ್ಗೆ ಅವರ ಪತ್ನಿ ವಂದನಾ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಅದರಂತೆ ಅವರ ಮೊಬೈಲ್ ಲೊಕೇಶನ್ ಹಾಕಿದಾಗ ವಾಲ್ಪಾಡಿ ಕೊಯಕುಡೆ ಚಡಾವ್ ತೋರಿಸುತ್ತಿದ್ದುದರಿಂದ ಪುಂಜಾಲಕಟ್ಟೆ ಪೊಲೀಸರು ಮತ್ತು ಸಂಬಂಧಿಕರು ಹುಡುಕಾಡಿಕೊಂಡು ಬಂದಿದ್ದರು. ಅದರೆ ಅವರ ಮೊಬೈಲ್ ಮಾತ್ರ ರಸ್ತೆ ಬದಿ ಪತ್ತೆಯಾಗಿದ್ದು ಬೈಕ್ ನಲ್ಲಿ ಬಂದಿದ್ದ ಲಕ್ಷ್ಮೀನಾರಾಯಣ ಪತ್ತೆಯಾಗಿಲ್ಲ.
ಕೆ.ಎ.-21 , EC 5599 ನಂಬರ್ ನ ಹೀರೊ ನೀಲಿ ಬಣ್ಣದ ಬೈಕ್ ನಲ್ಲಿ ಅವರು ಬಂದಿದ್ದರೆನ್ನಲಾಗಿದೆ .ಮೊಬೈಲ್ ನ್ನು ವಾಲ್ಪಾಡಿಯಲ್ಲಿ ಎಸೆದು ಬೈಕ್ ನಲ್ಲಿ ಹೋಗಿರಬಹುದೆಂದು ಹೇಳಲಾಗುತ್ತಿದೆ. ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸೆ. 8 ರಂದು ಅಮ್ಟಾಡಿ ಗ್ರಾ.ಪಂ.ನಲ್ಲಿ ಗ್ರಾಮ ಸಭೆನಡೆದ ಬಳಿಕ ಇವರು ತುಂಬಾ ಒತ್ತಡದಲ್ಲಿದ್ದರು ಎಂದು ಹೇಳಲಾಗಿದ್ದು, ಮಾನಸಿಕವಾಗಿ ನೊಂದುಕೊಂಡಿದ್ದ ಅವರು ಇತ್ತೀಚೆಗೆ ಬಹಳಷ್ಟು ಕುಗ್ಗಿ ಹೋಗಿದ್ದರು. ಇಲ್ಲಿನ ಪಿ.ಡಿ.ಒ.ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಇವರಿಗೆ ಹೆಚ್ಚವರಿಯಾಗಿ ಪಿ.ಡಿ.ಒ.ಹುದ್ದೆಯನ್ನು ನೀಡಲಾಗಿತ್ತು.
ಆದರೆ ಇವರು ಎರಡು ಹುದ್ದೆಯನ್ನು ನಿಭಾಯಿಸಲು ಸಾಧ್ಯವಾಗದೆ ನೊಂದುಕೊಂಡಿದ್ದರು, ಒತ್ತಡದಿಂದ ಇವರು ಅನಾರೋಗ್ಯಕ್ಕೆ ತುತ್ತಾಗಿದ್ದಾರಾ? ಎಂಬ ಪ್ರಶ್ನೆಯನ್ನು ಹಾಕುತ್ತಿದ್ದಾರೆ.
ಅವರು ನಿನ್ನೆ ಅಂದರೆ ಸೆ. 12 ರಂದುಮಧ್ಯಾಹ್ನ 12 ಗಂಟೆವರೆಗೆ ಆಫೀಸಿಗೆ ಬರದ ಕಾರಣ ಇಲ್ಲಿನ ಸಿಬ್ಬಂದಿ ಪೋನ್ ಮಾಡಿದಾಗ ನನಗೆ ಹುಷಾರಿಲ್ಲ ಕೆಲವೊಂದು ಟೆಸ್ಟ್ ಗಳನ್ನು ಇಸಿಜಿಸಹಿತ ಇನ್ನೂ ಕೆಲವು ಪರೀಕ್ಷೆ ನಡೆಸಿ ಮತ್ತೆ ಬರುವುದಾಗಿ ತಿಳಿಸಿದ್ದರಂತೆ. ಆ ಬಳಿಕ ಅಫೀಸಿಗೆ ಬರದೆ ಮನೆಗೂ ಹೋಗದೆ ಪೋನ್ ಸ್ವೀಚ್ ಆಫ್ ಆಗಿದ್ದು ಪತ್ತೆಯಿಲ್ಲ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…