ಮೂಡುಬಿದಿರೆ: ಮೂಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ 60ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 19 ರಿಂದ 23ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ. ಶ್ರೀಪತಿ ಭಟ್ ಅವರು ಹೇಳಿದ್ದಾರೆ.
ಸಮಾಜ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು ‘1964 ರಲ್ಲಿ ಆರಂಭಗೊಂಡ ಮೂಡುಬಿದಿರೆ ಗಣೇಶೋತ್ಸವಕ್ಕೆ ಅದರದ್ದೇ ಆದ ಇತಿಹಾಸವಿದ್ದು ಐದು ದಿವಸಗಳಲ್ಲಿ ನಡೆಯುವ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ, ಸಮಯಕ್ಕೆ ಸರಿಯಾಗಿ ನಡೆಯಲಿದೆ. 60ರ ಸಂಭ್ರಮದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮೂಡುಬಿದಿರೆ ಮಾತ್ರವಲ್ಲದೆ ಲೋಕಕಲ್ಯಾಣಕ್ಕಾಗಿ ಅಷ್ಟೋತ್ತರ ಸಹಸ್ರ ನಾಳಿಕೇರ ಅಷ್ಟದ್ರವ್ಯ ಗಣಯಾಗ ನಡೆಯಲಿದ್ದು ಇದಕ್ಕೆ ಸಂಬಂಧಿಸಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿದೆ.
19 ರಂದು ಬೆಳಿಗ್ಗೆ 10ರಿಂದ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು ಮೂಡುಬಿದಿರೆ ಜೈನ ಮಠದ ಮಹಾಸ್ವಾಮೀಜಿ ಯವರು ಆಶೀರ್ವಚನ ನೀಡಲಿದ್ದಾರೆ, ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣರು ದೀಪ ಪ್ರಜ್ವಲನ ಮಾಡಲಿದ್ದು ಮಂಗಳೂರು ಪೊಲೀಸ್ ಆಯುಕ್ತರು ಗೌರವ ಉಪಸ್ಥಿತ ರಿರಲಿದ್ದಾರೆ ಎಂದ ಅವರು ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಸಮಿತಿಯ ಪ್ರಧಾನ ಕಾರ್ಯದರ್ಶಿ ನಾರಾಯಣ ಪಿ.ಎಮ್. ಅವರು ಮಾತನಾಡಿ ‘ಐದು ದಿವಸಗಳಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ, ಪ್ರತಿದಿನ ಊಟ, ಉಪಹಾರದ ವ್ಯವಸ್ಥೆ ಇದೆ, ಕೊನೆಯ ದಿನ ವಿಸರ್ಜನಾ ಪೂಜೆ ನಡೆದು ರಾತ್ರಿ 8 ಗಂಟೆಗೆ ಸರಿಯಾಗಿ ವೈಭವದ ಶೋಭಾಯಾತ್ರೆ ಮೂಲಕ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಸಂಚಾಲಕರಾದ ರಾಜಾರಾಮ್ ನಾಗರಕಟ್ಟೆ, ಜತೆ ಕಾರ್ಯದರ್ಶಿ ಸುದರ್ಶನ ಎಮ್, ತೋಡಾರು ದಿವಾಕರ ಶೆಟ್ಟಿ, ಲಕ್ಷ್ಮಣ ಪೂಜಾರಿ, ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…