ಜನ ಮನದ ನಾಡಿ ಮಿಡಿತ

Advertisement

ರಸ್ತೆಗೆ ಹರಿಯುತ್ತಿದ್ದ ರಕ್ತ ಮಿಶ್ರಿತ ಕೊಳಚೆ ನೀರಿಗೆ ಪುರಸಭೆಯಿಂದ ಶಾಶ್ವತ ಪರಿಹಾರ

ಮೂಡುಬಿದಿರೆಯ ಮಾರ್ಕೆಟ್ ನಲ್ಲಿರುವ ಮಾಂಸದಂಗಡಿಗಳಿಂದ ಕಡಿದಿರುವ ಕುರಿ, ಕೋಳಿ, ಆಡುಗಳ ರಕ್ತ ಮತ್ತು ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯದಂತೆ ಮೂಡುಬಿದಿರೆ ಪುರಸಭೆಯ ಅಧಿಕಾರಿಗಳು ಶಾಶ್ವತ ಪರಿಹಾರ ನೀಡಿದ್ದಾರೆ.

ಮಾರ್ಕೆಟಿನಲ್ಲಿ ವ್ಯಾಪಾರ ಮಾಡುತ್ತಿರುವ ಮಾಂಸದಂಗಡಿಗಳಿಂದ ಕೆಲವು ದಿನಗಳಿಂದ ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯುತ್ತಿದ್ದು, ಇದರಿಂದ ಓಡಾಡುತ್ತಿರುವ ಪಾದಾಚಾರಿಗಳು ಮತ್ತು ಅಲ್ಲಿಯೇ ಪಕ್ಕದಲ್ಲಿ ಇತರ ವ್ಯಾಪಾರ ನಡೆಸುತ್ತಿರುವ ಅಂಗಡಿಯವರು ತೊಂದರೆಯನ್ನನ್ನು ಅನುಭವಿಸುತ್ತಿದ್ದರು.


ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯೂ ಪ್ರಸಾರಗೊಂಡಿತ್ತು. ಇದೀಗ ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಂಡು ರಸ್ತೆಯ ಬದಿಗಳಲ್ಲಿ ಹರಿಯುತ್ತಿದ್ದ ನೀರು ಪೈಪ್ ಮೂಲಕ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಮುಖ್ಯಾಧಿಕಾರಿ ಇಂದು ಅವರ ಕಾರ್ಯ ವೈಖರಿಯನ್ನು ಸ್ಥಳೀಯರು ಪ್ರಶಂಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಸಿಬಂದಿ ಸುಧೀಶ್ ಹೆಗ್ಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!