ಜನ ಮನದ ನಾಡಿ ಮಿಡಿತ

Advertisement

ಚಾರುವಸಂತ ರಂಗ ತಾಲೀಮಿಗೆ ಚಾಲನೆ ನೀಡಿದ ಡಾ. ಎಂ.ಮೋಹನ ಆಳ್ವ

ಹಲವು ಅತ್ಯುತ್ತಮ ಕೃತಿಗಳನ್ನು ಕನ್ನಡ ನಾಡಿಗೆ ನೀಡಿದ ನಾಡೋಜ ಹಂ.ಪ.ನಾಗರಾಜಯ್ಯರವರು ನಮ್ಮ ಒಬ್ಬ ನಾಡಿನ ಶ್ರೇಷ್ಠ ಸಾಹಿತಿ.

ಹದಿನಾಲ್ಕು ಭಾಷೆಗಳಿಗೆ ಅನುವಾದಗೊಂಡಿರುವ ಅವರ ಪ್ರಸಿದ್ಧ ಕೃತಿಯಾಗಿರುವ ಚಾರುವಸಂತ ದೇಸೀ ಕಾವ್ಯವನ್ನು ರಂಗಕ್ಕೆ ತರಲು ನಮ್ಮ ಸಂಸ್ಥೆಗೆ ಬಹಳ ಹೆಮ್ಮೆ ಅನಿಸಿದೆ’ ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.


ಡಾ.ಎಂ.ಮೋಹನ ಆಳ್ವ ಅವರು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯಲಿರುವ ಚಾರುವಸಂತ ನಾಟಕದ ತಾಲೀಮನ್ನು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೇಲ್ ನಲ್ಲಿ ನಾಟಕದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.


ಮುಖ್ಯ ಅತಿಥಿಗಳಾಗಿದ್ದ ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಮಾತನಾಡಿ ‘ ನನ್ನ ಗುರುಗಳ ಕೃತಿಯೊಂದು ರಂಗಕೃತಿಯಾಗುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಹಲವು ಮಹತ್ವದ ರಂಗ ಪ್ರಯೋಗಗಳನ್ನು ರಂಗಕ್ಕೆ ತಂದಿರುವ ಡಾ.ಜೀವನ್ ರಾಂ ಸುಳ್ಯರ ನಿರ್ದೇಶನದಲ್ಲಿ ಈ ಚಾರುವಸಂತವು ಕನ್ನಡ ರಂಗಭೂಮಿಯಲ್ಲಿ ಹೊಸ ಸಂಚಲನ ಮೂಡಿಸಲಿ’ ಎಂದು ಶುಭ ಹಾರೈಸಿದರು.


ಕೃತಿಕಾರ ನಾಡೋಜ ಹಂ.ಪ.ನಾಗರಾಜಯ್ಯ ಚಾರುವಸಂತದ ರಂಗರೂಪವನ್ನು ಸಿದ್ಧ ಪಡಿಸಿದ ಸಾಹಿತಿ, ರಂಗಕರ್ಮಿ ಡಾ.ನಾ.ದಾ.ಶೆಟ್ಟಿ ಅವರ ಶ್ರಮವನ್ನು ಶ್ಲಾಘಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರ ಜೊತೆ ನೀನಾಸಂ ರಂಗಾಯಣಗಳಲ್ಲಿ ಅನುಭವ ಪಡೆದ ಕೆಲವು ಕಲಾವಿದರೂ ಪಾತ್ರವಹಿಸಲಿದ್ದು ಅಕ್ಟೋಬರ್ ಕೊನೆಯ ವಾರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ನಾಟಕದ ನಿರ್ದೇಶಕ ಜೀವನ್ ರಾಂ ಸುಳ್ಯ ತಿಳಿಸಿದರು.‌

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!