ಹಲವು ಅತ್ಯುತ್ತಮ ಕೃತಿಗಳನ್ನು ಕನ್ನಡ ನಾಡಿಗೆ ನೀಡಿದ ನಾಡೋಜ ಹಂ.ಪ.ನಾಗರಾಜಯ್ಯರವರು ನಮ್ಮ ಒಬ್ಬ ನಾಡಿನ ಶ್ರೇಷ್ಠ ಸಾಹಿತಿ.
ಹದಿನಾಲ್ಕು ಭಾಷೆಗಳಿಗೆ ಅನುವಾದಗೊಂಡಿರುವ ಅವರ ಪ್ರಸಿದ್ಧ ಕೃತಿಯಾಗಿರುವ ಚಾರುವಸಂತ ದೇಸೀ ಕಾವ್ಯವನ್ನು ರಂಗಕ್ಕೆ ತರಲು ನಮ್ಮ ಸಂಸ್ಥೆಗೆ ಬಹಳ ಹೆಮ್ಮೆ ಅನಿಸಿದೆ’ ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಡಾ.ಎಂ.ಮೋಹನ ಆಳ್ವ ಅವರು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯಲಿರುವ ಚಾರುವಸಂತ ನಾಟಕದ ತಾಲೀಮನ್ನು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೇಲ್ ನಲ್ಲಿ ನಾಟಕದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿದ್ದ ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಮಾತನಾಡಿ ‘ ನನ್ನ ಗುರುಗಳ ಕೃತಿಯೊಂದು ರಂಗಕೃತಿಯಾಗುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಹಲವು ಮಹತ್ವದ ರಂಗ ಪ್ರಯೋಗಗಳನ್ನು ರಂಗಕ್ಕೆ ತಂದಿರುವ ಡಾ.ಜೀವನ್ ರಾಂ ಸುಳ್ಯರ ನಿರ್ದೇಶನದಲ್ಲಿ ಈ ಚಾರುವಸಂತವು ಕನ್ನಡ ರಂಗಭೂಮಿಯಲ್ಲಿ ಹೊಸ ಸಂಚಲನ ಮೂಡಿಸಲಿ’ ಎಂದು ಶುಭ ಹಾರೈಸಿದರು.
ಕೃತಿಕಾರ ನಾಡೋಜ ಹಂ.ಪ.ನಾಗರಾಜಯ್ಯ ಚಾರುವಸಂತದ ರಂಗರೂಪವನ್ನು ಸಿದ್ಧ ಪಡಿಸಿದ ಸಾಹಿತಿ, ರಂಗಕರ್ಮಿ ಡಾ.ನಾ.ದಾ.ಶೆಟ್ಟಿ ಅವರ ಶ್ರಮವನ್ನು ಶ್ಲಾಘಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರ ಜೊತೆ ನೀನಾಸಂ ರಂಗಾಯಣಗಳಲ್ಲಿ ಅನುಭವ ಪಡೆದ ಕೆಲವು ಕಲಾವಿದರೂ ಪಾತ್ರವಹಿಸಲಿದ್ದು ಅಕ್ಟೋಬರ್ ಕೊನೆಯ ವಾರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ನಾಟಕದ ನಿರ್ದೇಶಕ ಜೀವನ್ ರಾಂ ಸುಳ್ಯ ತಿಳಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…