ರಾಜ್ಯ

ಬೆಳ್ತಂಗಡಿಯ ಬಿ.ಕೆ ದೇವರಾವ್ ಇವರಿಗೆ ರಾಷ್ಟ್ರಪತಿಯಿಂದ ʼಪ್ರತಿಷ್ಠಿತ ರಾಷ್ಟ್ರೀಯ ಕೃಷಿ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿʼ ಪ್ರದಾನ

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಬೆಳ್ತಂಗಡಿ ತಾಲೂಕಿನ ಮಿತ್ತ ಬೈಲಿನ ಬಿ ಕೆ ದೇವರಾವ್ ಇವರಿಗೆ ಪ್ರತಿಷ್ಠಿತ  ರಾಷ್ಟ್ರೀಯ ಕೃಷಿ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿ ದೊರಕಿದೆ.


 ಹಲವು ಸಮಸ್ಯೆಗಳನ್ನ ಎದುರಿಸುತ್ತಿರುವ ಕೃಷಿ ಕ್ಷೇತ್ರ ಹಲವು ಕಡೆ ಅಪ್ರತಿಮ ಸಾಧನೆಗಳನ್ನು ಮಾಡುತ್ತಿರುವುದು ಸಂತೋಷದ ವಿಷಯ, ಅದರಲ್ಲೂ ಕರಾವಳಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ  ಜಿಲ್ಲೆಯ ಕೃಷಿಕರು ಸಾಧನೆ ಮಾಡಿ ಹಲವು ಪ್ರತಿಷ್ಠಿತ ಗೌರವ ಸನ್ಮಾನಗಳಿಗೆ ಭಾಜನರಾಗಿದ್ದಾರೆ ಎನ್ನುವುದು ಸಂತಸದ ವಿಷಯ, ಗೌರವ ಸನ್ಮಾನಕ್ಕೆ ಇನ್ನೊಂದು ಸೇರ್ಪಡೆ ಬೆಳ್ತಂಗಡಿ ತಾಲೂಕಿನ ಬಿ ಕೆ ದೇವ ರಾವ್  ಹವಾಮಾನ ವೈಪರಿತ್ಯ,  ಕಾರ್ಮಿಕರ ಕೊರತೆ, ನೀರಿನ ಸಮಸ್ಯೆ, ಅನುಭವದ ಕೊರತೆ  ಮೊದಲಾದ ಹಲವಾರು ಸಮಸ್ಯೆಗಳು ರೈತರನ್ನು ಕಾಡುತ್ತಿದ್ದರು ಕೆಲವೊಂದು ರೈತರು  ಸಾಧನೆಗಳ ಮೂಲಕ ಕೃಷಿಯಲ್ಲಿ ಹೊಸತನವನ್ನು ಕಂಡುಕೊಳ್ಳುತ್ತಿದ್ದಾರೆ. ಅಪರೂಪದ ತಳಿಗಳನ್ನು ಸಂಗ್ರಹಿಸಿ ಬೆಳೆಸುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ಕೃಷಿಲೋಕಕ್ಕೆ ನೀಡುತ್ತಿದ್ದಾರೆ.

 ದಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ರೈತ ಅಮೈ ಬಿ.ಕೆ. ದೇವರಾವ್. ಹಲವಾರು ಕೃಷಿ ಸಂಬಂಧಿ ಸಸ್ಯಗಳ ನೂರಾರು ತಳಿಗಳನ್ನು ಸಂಗ್ರಹಿಸಿ,ಬೆಳೆಸಿರುವ ಇವರಿಗೆ ‘ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ’ 2020- 21 ಒಲಿದು ಬಂದಿದ್ದು, ಸೆಪ್ಟೆಂಬರ್ 12ರಂದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.ದೇಶದ  ರಾಜ್ಯದ ಇಬ್ಬರಿಗೆ ಈ ಪ್ರಶಸ್ತಿ ಸಿಕ್ಕಿದ್ದು ಅದು ಒಂದೂವರೆ ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಹೊಂದಿದೆ.


 ಪ್ರಶಸ್ತಿ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದ ಬಿ.ಕೆ.ದೇವರಾವ್ ಇವರು, ಕೃಷಿಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬನು ಪ್ರಯತ್ನಿಸಬೇಕು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತಳಿಗಳ ಸಂಗ್ರಹ ಹಾಗೂ ಅವುಗಳನ್ನು ಬೆಳೆಸುವ ಕೆಲಸ ಮಾಡುವ ಉತ್ಸಾಹ ಹೊಂದಿದ್ದೇನೆ” ಎಂದರು. ಇವರ ಪುತ್ರ ಬಿ.ಕೆ. ಪರಮೇಶ್ವರ್ ರಾವ್ ಅವರು ತಂದೆಯ ಸಾಧನೆಗೆ ಬೆನ್ನೆಲುಬಾಗಿದ್ದು ಬೀಜ ಬ್ಯಾಂಕ್ ಸ್ಥಾಪಿಸಿ, ಬೇಡಿಕೆ ಇಡುವ ರೈತರಿಗೆ ತಮ್ಮ ತಂದೆಯ ಸಂಗ್ರಹದಲ್ಲಿರುವ ಭತ್ತದ ತಳಿಯ ಒಂದು ಮುಷ್ಟಿ ಭತ್ತ ನೀಡುವ ಯೋಜನೆ ಕೈಗೊಂಡಿದ್ದಾರೆ. ಒಂದು ಮುಷ್ಟಿ ಭತ್ತ ಒಯ್ಯುವ ರೈತ ಇದರ ಬೆಳೆ ಬೆಳೆದ ಬಳಿಕ ಎರಡು ಮುಷ್ಟಿ ಭತ್ತವನ್ನು ಇವರಿಗೆ ನೀಡಬೇಕು. ಇದರಿಂದ ಭತ್ತದ ತಳಿಗಳು ಹೆಚ್ಚು ಕಡೆ ಬೆಳೆಯಲು ಹಾಗೂ ಬೇಡಿಕೆ ಸಲ್ಲಿಸುವವರಿಗೆಲ್ಲ ನೀಡಲು ಸಹಕಾರಿಯಾಗುತ್ತದೆ ಎನ್ನುವುದು ಕುಟುಂಬದ ಆಲೋಚನೆ, ಆ ಮುಖಾಂತರ ಇನ್ನಷ್ಟು ಜನರಿಗೆ ಬತ್ತದ ಬೆಳೆ ಪ್ರೇರಣೆಯಾಗಲಿ ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

12 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

12 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

12 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

18 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

18 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

2 days ago