ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ, ಈ ಪ್ರಕರಣ ಸಮಗ್ರ ತನಿಖೆ ಆಗಬೇಕು, ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಟಕೆಟ್ ಕೊಡಿಸ್ತೀವಿ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಆರೋಪಿಗಳ ತನಿಖೆಯಾಗಲಿ ಆಗ ನಿಜಾಂಶ ಹೊರಬರುತ್ತದೆ. ಈ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.



