ಬಂಟ್ವಾಳ : ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಲೂಕಿನ ವಿವಧ ಕಡೆಗಳಲ್ಲಿ ಆಚರಿಸುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಸಮಾಜದ ಪ್ರಮುಖರ ಪೂರ್ವಭಾವಿ ಸಭೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಅವರ ನೇತೃತ್ವದಲ್ಲಿ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು ಗಣೇಶ್ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆ ಇತರರಿಗೆ ತೊಂದರೆಯಾಗದಂತೆ ಮಾಡುವಂತೆ ಸಂಘಟಕರಿಗೆ ಸೂಚಿಸಿದರು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬೇಡಿ,ಮತ್ತು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಅದಷ್ಟು ಶಿಸ್ತಿನಲ್ಲಿ ಮಾಡುವಂತೆ ತಿಳಿಸಿದರು.
ತಾಲೂಕಿನಲ್ಲಿ ಆಚರಿಸಲಾಗುವ ಪ್ರತಿಯೊಂದು ಕಡೆಗಳಲ್ಲೂ ತಾತ್ಕಾಲಿಕ ಸಿ.ಸಿ.ಕ್ಯಾಮರಾ ವನ್ನು ಅಳವಡಿಸುವಂತೆ ತಿಳಿಸಿದರು.
ಗಣೇಶನ ವಿಸರ್ಜನೆ ವೆರೆಗೆ ರಾತ್ರಿಪಾಳಿಯಲ್ಲಿ ಸ್ವಯಂ ಸೇವಕರು ಕಾಯುವಂತೆ ತಿಳಿಸಿದರು.
ಮೆರವಣಿಗೆ ವೇಳೆ ಡಿ.ಜೆ.ಗೆ ಅವಕಾಶ ನೀಡುವುದಿಲ್ಲ. ಸ್ಥಳೀಯ ಆಡಳಿತ, ಮೆಸ್ಕಾಂ, ಅಗ್ನಿಶಾಮಕ ದಳದವರಿಂದ ಅನುಮತಿ ಪಡೆದುಕೊಳ್ಳಿ ಎಂದು ತಿಳಿಸಿದರು.ಯಾವುದೇ ಗೊಂದಲಗಳಿಲ್ಲದೆ,ಶಾಂತಿಯುತವಾಗಿ ಕಾರ್ಯಕ್ರಮಗಳನ್ನು ನಡೆಸುವಂತೆ ಸಂಘಟಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರ ಪೋಲೀಸ್ ಠಾಣಾ ಎಸ್. ಐ.ರಾಮಕೃಷ್ಣ, ಟ್ರಾಫಿಕ್ ಎಸ್.ಐ.ಸುತೇಶ್ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…