ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್ ಮತ್ತು ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕೆ ತಂದು ಹಾಕಿರುವ ಶೀಟ್ ಒಟ್ಟು ರೂ 2,50,000 ಮೌಲ್ಯದ ಸೊತ್ತುಗಳನ್ನು ಕದ್ದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ತೋಡಾರು ನಿವಾಸಿ ಮೊಹಮ್ಮದ್ ಸಾಹಿಲ್ ಬಂಧಿತ ಆರೋಪಿ. ಕಳೆದ ಜೂನ್ ತಿಂಗಳಿನಲ್ಲಿ ಬೆಳುವಾಯಿಯಲ್ಲಿ ನಿರ್ಮಿಸಲು ತಂದು ಹಾಕಿರುವ ಶೀಟ್ ಗಳು ಮತ್ತು ಕೆಸರುಗದ್ದೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಕಬ್ಬಿಣದ ಜಾಕ್ ಮತ್ತು ಪೈಪ್ ಗಳು ಆಗಸ್ಟ್ ತಿಂಗಳಿನಲ್ಲಿ ಕಳ್ಳತನವಾಗಿತ್ತು.
ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ ಮತ್ತು ದಿನೇಶ್ ಕುಮಾರ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಲ್ಲಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ದಿವಾಕರ ರೈ ಮತ್ತು ಸಿದ್ದಪ್ಪ ನರನೂರ, ಸಿಬಂಧಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮ್ಮದ್ ಮತ್ತು ನಾಗರಾಜ ಅವರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…