ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಮೂಲತಃ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ 2020ರ ಬಳಿಕ ತಲೆಮರೆಸಿಕೊಂಡಿದ್ದನು.
ಈತ ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್ ಬಾಂಬ್ ತೆಗೆದುಕೊಂಡು ಹೋಗಿದ್ದ ಮೊಹಮ್ಮದ್ ಶಾರೀಖ್ ಜತೆಯೂ ಸಂಪರ್ಕದಲ್ಲಿದ್ದ ಎಂದು ಎನ್ ಐಎ ತಿಳಿಸಿದೆ.
2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…