ಮುಲ್ಕಿ; ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಗ್ರಾಮೀಣ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರ, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು , ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ನಡೆದಿದೆ.
ಕಾರ್ಯಕ್ರಮದಲ್ಲಿ ಸಂಪನ್ಮೂಲ ಮಹಿಳೆಯಾಗಿ ಭಾಗವಹಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಪಣಂಬೂರುವಿನ ನಿವೃತ್ತ ಮುಖ್ಯ ಶಿಕ್ಷಕಿ ರತಿ ವೈ ಇವರು ಮಾತನಾಡಿ, ಹಿಂದಿ ದಿವಸ್ ಕಾರ್ಯಕ್ರಮವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಅಂಗ್ರೇಜಿ ಭಾಷೆಯ ಹಾವಳಿಯ ಮಧ್ಯೆ ದೇವನಾಗರಿ ಲಿಪಿಯಲ್ಲಿರುವ ಈ ಭಾಷೆಯಲ್ಲಿ ದೇಶದಾದ್ಯಂತ ಬಳಕೆಯಲ್ಲಿರುವ ಮಾತೃಭಾಷೆಗಳ ಜೊತೆ ಹಿಂದಿ ಭಾಷೆಯಲ್ಲಿಯೂ ಸಂವಹಿಸಿ ವ್ಯವಹರಿಸಬಲ್ಲ, ಈ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಯುವಕ ಸಂಘದ ಉಪಾಧ್ಯಕ್ಷರಾದ ದಿವಾಕರ ಪದ್ಮಶಾಲಿ ಹಾಗೂ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಯಶೋದ ಪಿ ರಾವ್ ಇವರು ಉಪಸ್ಥಿತರಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆ ಅನುಪಮಾ ಎ ರಾವ್ ಸ್ವಾಗತಿಸಿ , ವೇದ ಶೆಟ್ಟಿಗಾರ್ ಇವರು ಧನ್ಯವಾದ ನೀಡಿದರು. ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…