ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಇನ್ನೂ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.



