ನಾಟಕ ಪ್ರದರ್ಶನದ ವೇಳೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ.

ಶರಣು ಬಾಗಲಕೋಟೆ (24) ಎಂಬ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದು, ವೃತ್ತಿಯಲ್ಲಿ ಪೋಸ್ಟ್ ಮ್ಯಾನ್ ಕೆಲಸ ನಿರ್ವಹಿಸುತ್ತಿದ್ದನು.
ಶರಣು ಕೊಟ್ಯಾಳ್ ‘ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ’ ನಾಟಕ ಪ್ರದರ್ಶನ ವೇಳೆ ಡ್ಯಾನ್ಸ್ ಮಾಡಲು ಮುಂದಾಗಿದ್ದು, ಈ ವೇಳೆ ವೇದಿಕೆಯ ಮೇಲೆಯೇ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದ ಶರಣು ಕೊಟ್ಯಾಳ್ ಇತ್ತೀಚೆಗೆ ಪೋಸ್ಟ್ ಮ್ಯಾನ್ ಆಗಿ ನೇಮಕಗೊಂಡಿದ್ದ. ಗ್ರಾಮ ದೇವರ ಜಾತ್ರೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ. ತಾನು ಸಹ ನಾಟಕದಲ್ಲಿ ಡ್ಯಾನ್ಸ್ ಮಾಡಲು ವೇದಿಕೆ ಏರಿದ್ದ. ಈ ವೇಳೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದಿದ್ದಾನೆ.
ವೇದಿಕೆ ಕೆಳಗೆ ಕುಳಿತು ನಾಟಕ ನೋಡುತ್ತಿದ್ದ ಗ್ರಾಮಸ್ಥರಲ್ಲೂ ಆತಂಕ ಸೃಷ್ಟಿಸಿದೆ.
ಇನ್ನು ಶರಣು ಕೊಟ್ಯಾಳ್ಗೆ ಹೃದಯಾಘಾತವಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



