ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮೆಲ್ಕಾರ್ ಎಂಬಲ್ಲಿ ನಡೆದಿದೆ.
ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ಎಂಬಲ್ಲಿ ಸರ್ವಿಸ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್. ಸಿ. ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ.
ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…