ಮಿನಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಧರ್ಮಸ್ಥಳ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೇಪು ದೇವಸ್ಥಾನದ ಸಮೀಪ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಮಿನಿ ಬಸ್ ನಡುವೆ ಮೀನಾಡಿ ಸಮೀಪದ ಕೇಪು ದೇವಸ್ಥಾನದ ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ.ಮಿನಿ ಬಸ್ಸು ಚಾಲಕ ಉಡುಪಿ ಜಿಲ್ಲೆಯ ಉದ್ಯಾವರ ಮನೋಹರ ಪೂಜಾರಿ ಎಂಬವರು ಘಟನೆ ಬಗ್ಗೆ ದೂರು ನೀಡಿದ್ದಾರೆ.



