ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಇದೇ ಬರುವ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನದ ಪ್ರಯುಕ್ತ ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಕರಪತ್ರವನ್ನು ಸೆ. 15ರಂದು ಬೆಂಗಳೂರಿನ ಬಂಟರ ಸಂಘದಲ್ಲಿ ಇದರ ಅಧ್ಯಕ್ಷರಾದ ಮುರಳೀಧರ ಹೆಗ್ಡೆಯವರು ಬಿಡುಗಡೆ ಮಾಡಿದ್ದಾರೆ.
ಜಾಗತಿಕ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಕಾರ್ಯಕ್ರಮದ ವಿವರ ನೀಡಿ ಬೆಂಗಳೂರಿನ ಸಮಸ್ತ ಬಂಟರನ್ನು ಕಾರ್ಯಕ್ರಮಕ್ಕೆ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.
ಅಜಿತ್ ಶೆಟ್ಟಿ ಉಳ್ತುರು ಇವರು ಕಾರ್ಯಕ್ರಮ ನಿರ್ವಹಿಸಿದ್ದು, ಕ್ರೀಡಾಸಮಿತಿ ಸಂಚಾಲಕರಾದ ಗಿರೀಶ್ ಶೆಟ್ಟಿ ತೆಳ್ಳರ್ ಮತ್ತು ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಚಂದ್ರಹಾಸ ಶೆಟ್ಟಿಯವರು ಕಾರ್ಯಕ್ರಮದ ರೂಪುರೇಷೆ ನಿಯಮಗಳ ಬಗ್ಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿಯವರನ್ನು ಬೆಂಗಳೂರು ಬಂಟರ ಸಂಘದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ನಿರ್ದೇಶಕರಾದ ಅಶೋಕ್ ಶೆಟ್ಟಿ ಬೆಳ್ಳಾಡಿ, ಎಂ. ನಂದ್ಯಪ್ಪ ಶೆಟ್ಟಿ ಗೌ ಕಾರ್ಯದರ್ಶಿ ಬಂಟರ ಸಂಘ ಮೈಸೂರ್, ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಬಂಟರ ಸಂಘ ಬೆಂಗಳೂರು ಇದರ ಮಾಜಿ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಆನಂದರಾಮಶೆಟ್ಟಿ, ಉಪಾದ್ಯಕ್ಷರಾದ ಡಾ. ಜಗದೀಶ ಶೆಟ್ಟಿ, ಶ್ರೀಮತಿ ಗೀತಾಂಜಲಿ ಅಜಿಲ, ಖಜಾಂಚಿ ಅಮರನಾಥಶೆಟ್ಟಿ ಜೊತೆ ಕಾರ್ಯದರ್ಶಿ ಶ್ಯಾಮಲ ಶೆಟ್ಟಿ,ಕಾರ್ಯಕಾರಿ ಸಮಿತಿ ಸದಸ್ಯರಾದ ಸುದೀಪ ನೈಕ್, ಕೀರ್ತನ್ ಶೆಟ್ಟಿ, ನಿರಂಜನ್ ಶೆಟ್ಟಿ, ಜಯಶ್ರೀ ಸಿ ರೈ, ಸುಧಾಕರ ಶೆಟ್ಟಿ, ಸಂದೀಪ ಶೆಟ್ಟಿ, ಕಿರಣ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಚಂದ್ರಹಾಸ ರೈ, ಮಾಜಿ ಉಪಾಧ್ಯಕ್ಷರಾದ ಬೋಜರಾಜ ಶೆಟ್ಟಿ ಕೊರ್ಗಿ, ಮಾಜಿ ಕಾರ್ಯದರ್ಶಿ ಮಧುಕರ ಶೆಟ್ಟಿ, ಹಾಗೂ ಬಂಟರ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…