ವಿಟ್ಲ: ಆಟೋ ರಿಕ್ಷಾವೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಹಿತ ಆರೋಪಿಯೋರ್ವರನ್ನು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೆ.16 ರಂದು ನಡೆದಿದೆ.
ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ಬಂಧಿತ ಆರೋಪಿಯಾಗಿದ್ದಾರೆ.
ವಿಟ್ಲ ಠಾಣಾ ಪೊಲೀಸರು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಆ ದಾರಿಯಾಗಿ ಬಂದ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಆಟೋ ರಿಕ್ಷಾದೊಳಗೆ 6.110 ಕೆ ಜಿ. ಗಾಂಜಾ ಪತ್ತೆಯಾಗಿದೆ. ಕೂಡಲೇ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ 1,35,000 ರೂಪಾಯಿ ಮೌಲ್ಯದ 6.110 ಕೆ ಜಿ. ಗಾಂಜಾ ಸಹಿತ 1,60,000 ರೂಪಾಯಿ ಮೌಲ್ಯದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…