ಬೈಕ್‌ನಲ್ಲಿ ಬಂದು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತ್ರಿಶೂರ್‌ನ ವಡಕ್ಕಂಚೇರಿ ಮೂಲದ ಶೇಖ್ ತನ್ಸೀರ್ (20) ಮತ್ತು ಕೋಝಿಕ್ಕೋಡ್‌ನ ಕಡಮೇರಿಯ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 50 ಸಾವಿರ ಮೌಲ್ಯದ 2.77 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ, ಎರಡು ಮೊಬೈಲ್ ಫೋನ್‌ಗಳು ಮತ್ತು ಒಂದು ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.



