ತೋಕೂರು ಸ್ಫೋರ್ಟ್ಸ್ ಕ್ಲಬ್ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ (ರಿ) ತೋಕೂರು,ಹಳೆಯಂಗಡಿ ಇದರ ವತಿಯಿಂದ ಗ್ರಾಮ ಪಂಚಾಯತ್ ಪಡುಪಣಂಬೂರು ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಕುಸುಮಾ ಚಂದ್ರಶೇಖರ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಹೇಮನಾಥ ಅಮೀನ್ ಅವರನ್ನು ರವಿವಾರದಂದು ಸ್ಫೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಶಾಲು ಹೊದೆಸಿ, ಫಲ ಪುಷ್ಪ ಹಾಗೂ ಕಿರು ಕಾಣಿಕೆ ನೀಡಿ ಗೌರವಿಸಿ, ಇವರ ಅವಧಿಯಲ್ಲಿ ಗ್ರಾಮವು ಮತ್ತಷ್ಟು ಸರ್ವತೋಮುಖ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸ್ಫೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷರು, ಅದ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



