ಸಾಂಪ್ರದಾಯಿಕ ಕಸುಬುಗಳ ಮೂಲಕ ದೇಶಕ್ಕೆ ಕೊಡುಗೆ ಕೊಟ್ಟ ಕುಶಲಕರ್ಮಿಗಳು ಮತ್ತೆ ಮುನ್ನಲೆಗೆ ಬರಲಿದ್ದಾರೆ: ಶಾಸಕ ವೇದವ್ಯಾಸ್ ಕಾಮತ್
ಸ್ವಾತಂತ್ರ್ಯ ಪೂರ್ವದಿಂದಲೂ ದೇಶದ ಏಳಿಗೆಗೆ ತಮ್ಮದೇ ಆದ ಸಾಂಪ್ರದಾಯಿಕ ಕಸಬುಗಳ ಮೂಲಕ ಅಮೂಲ್ಯ ಕೊಡುಗೆಯನ್ನು ಕೊಟ್ಟಿರುವ ಕರ ಕುಶಲಕರ್ಮಿಗಳನ್ನು ಮತ್ತೆ ಜಾಗತಿಕ ಮುನ್ನಲೆಗೆ ತರುವ ನಿಟ್ಟಿನಲ್ಲಿ ಭಗವಾನ್ ವಿಶ್ವಕರ್ಮ ಜಯಂತಿಯಂದು “ಪಿಎಂ ವಿಶ್ವಕರ್ಮ” ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು

ಕೇಂದ್ರ ಸರ್ಕಾರದ “ಪಿಎಂ ವಿಶ್ವಕರ್ಮ” ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರ ಜೊತೆಗೆ ನಗರದ ಕಾರ್ ಸ್ಟ್ರೀಟ್ ಭಾಗದಲ್ಲಿರುವ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಜಿಲ್ಲಾಡಳಿತದ ವತಿಯಿಂದ ನಡೆಯಲಿದ್ದ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ತೆರಳಿದರು.
ಈ ವೇಳೆ ಆಹ್ವಾನವೇ ಇಲ್ಲದಿದ್ದರೂ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಆದರೆ ಮುಖ್ಯವಾಗಿ ಉಪಸ್ಥಿತರಿರಬೇಕಿದ್ದ ಜಿಲ್ಲೆಯ ಉಸ್ತುವಾರಿ ಸಚಿವರೇ ಇರಲಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಬಿಟ್ಟರೆ ಸರ್ಕಾರದ ಬೇರಾವುದೇ ಪ್ರತಿನಿಧಿಗಳು ಇರಲಿಲ್ಲ. ಶಿಷ್ಟಾಚಾರದ ಪ್ರಕಾರ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ಬೇಜವಾಬ್ದಾರಿ ಎದ್ದು ಕಾಣಿಸುತ್ತಿತ್ತು. ಇದು ಅತ್ಯಂತ ಬೇಸರದ ಸಂಗತಿ ಎಂದು ತಿಳಿಸಿದರು.








