ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ಭಾರತದ ಪ್ರಧಾನಿ ನರೇಂದ್ರ ಮೋದಿಯ ಜನ್ಮದಿನದ ಪ್ರಯುಕ್ತ ಉಚಿತ 1,000 ತೆಂಗಿನ ಸಸಿ ವಿತರಣಾ ಕಾರ್ಯಕ್ರಮ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯ ಜನ್ಮದಿನದಂದು ಅನುಕೂಲವಾಗುವಂತೆ ಕಲ್ಪವೃಕ್ಷವಾಗಿರುವ ತೆಂಗಿನ ಸಸಿ ವಿತರಣೆ ಅಭಿನಂದನೀಯ ಎಂದರು.

ಅಧ್ಯಕ್ಷತೆಯನ್ನು ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ಡಾ. ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆಎಂಎಫ್ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ, ಮುಲ್ಕಿ – ಮೂಡಬಿದ್ರೆ ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ನಿವೃತ್ತ ಉಪನ್ಯಾಸಕ ಸೊಂದ ಭಾಸ್ಕರ್ ಭಟ್, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಹಿಲ್ಡಾ ಡಿಸೋಜ, ಸುಚೇತಾ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು. ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಬಳಿಕ ತೆಂಗಿನ ಸಸಿ ವಿತರಣಾ ಸಮಾರಂಭ ನಡೆಯಿತು.




