ಮೂಡುಬಿದಿರೆ: ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಭಾನುವಾರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.
ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಅವರು ವಿಶ್ವಕರ್ಮ ಜಯಂತಿಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿ ಬ್ರಹ್ಮಾಂಡವನ್ನು ಸೃಷ್ಟಿಸಿದ್ದು ವಿಶ್ವಕರ್ಮ. ಶಿಲ್ಪವೃತ್ತಿಯೆಂಬುದು ಕೇವಲ ವೃತ್ತಿಯಲ್ಲ. ನಿಸ್ತೇಜ ವಸ್ತುಗಳಿಗೆ ಜೀವ ತುಂಬುವ ಆ ವೃತ್ತಿಯೊಂದಿಗೆ ಆಧ್ಯಾತ್ಮ, ಕೌಶಲ್ಯ, ತ್ಯಾಗ, ತಪಸ್ಸಿನ ಗುಣ ಮಿಳಿತಗೊಂಡಿದೆ ಎಂದರು. ವಿಜ್ಞಾನ ತಂತ್ರಜ್ಞಾನದಲ್ಲಿ ನಾವೆಷ್ಟೇ ಮುಂದುವರಿದಿದ್ದರೂ ಬ್ರಹ್ಮಾಂಡದ ಸೃಷ್ಟಿಯ ಬಗ್ಗೆ ಕುತೂಹಲವಿದೆ. ವಿಶ್ವಕರ್ಮನು ಶೋಧನೆ ಮಾಡಿದಷ್ಟು ಆಧ್ಯಾತ್ಮದತ್ತ ಸೆಳೆಯುತ್ತದೆ. ಎಲ್ಲಾ ದೇವರಿಗೆ ಮೂರ್ತರೂಪವನ್ನು ನೀಡಿದ್ದು ವಿಶ್ವಕರ್ಮ, ವಿಶ್ವಕರ್ಮರೇ ಸನಾತನ ಸಂಸ್ಕೃತಿಯ ಮೂಲವಾಗಿದ್ದಾರೆ ಎಂದ ಅವರು ಪರಂಪರೆಯಲ್ಲಿ, ಇತಿಹಾಸದಲ್ಲಿ ಭವ್ಯತೆಯನ್ನು ಹೊಂದಿರುವ ವಿಶ್ವಕರ್ಮ ಸಮುದಾಯದ ವೃತ್ತಿಗಳಿಗೆ ಭವಿಷ್ಯದ ಉದ್ಯಮರಂಗದಲ್ಲಿ ವಿಫುಲ ಅವಕಾಶಗಳಿವೆ ಎಂದರು.
ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.
ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅಧ್ಯಕ್ಷತೆ ವಹಿಸಿ, ದಾರ್ಶನಿಕರು, ಮಹಾಪುರುಷರ ಚಿಂತನೆಗಳನ್ನು ಅನುಸರಿಸುವುದು ಮುಖ್ಯ. ಸರಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳು ಜಾತಿ ಮತ ಧರ್ಮವನ್ನು ಮೀರಿದ ಆಚರಣೆಗಳಾಗಬೇಕಾದುದು ಔಚಿತ್ಯ ಪೂರ್ಣ ಎಂದರು.
ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಶಿವರಾಮ ಆಚಾರ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಡೆಪ್ಯೂಟಿ ತಹಸೀಲ್ದಾರ್ ರಾಮ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…