ಜನ ಮನದ ನಾಡಿ ಮಿಡಿತ

Advertisement

ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿರಾಯ..!

ಸುಳ್ಯ ಜಯನಗರ ನಿವಾಸಿ ಮಹಿಳೆಗೆ ವಿದೇಶದಲ್ಲಿರುವ ಗಂಡ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ವಿಭಿನ್ನ ಘಟನೆ ನಡೆದಿದೆ.

ಕೇರಳ ತ್ರಿಶೂಲ್‌ ಮೂಲದ ಅಬ್ದುಲ್ ರಾಶಿದ್‌ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಹಿಳೆಯನ್ನು ವಿವಾಹವಾಗಿದ್ರು. ವಿವಾಹದ ಬಳಿಕ ಜೊತೆಗೆ ಉತ್ತಮವಾಗಿ ಸಂಸಾರ ನಡೆಸಿದ್ದು, ಇವರ ದಾಂಪತ್ಯಕ್ಕೆ ಎರಡು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದು ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಮಹಿಳೆಯನ್ನು ಸುಳ್ಯದಲ್ಲಿರುವ ತವರುಮನೆಯಲ್ಲಿ ಬಿಟ್ಟು ವಿದೇಶಕ್ಕೆ ಮರಳಿದ್ದಾನೆ.

ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಸಂಬಂಧಿಕರು, ಹಿರಿಯರು ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದರು. ಆದರೆ ಇದು ಯಾವುದನ್ನು ಕೇಳದೇ ಪತಿ ರಾಶಿದ್‌ ಏಕಾಏಕಿ ಪತ್ನಿಯ ಮೊಬೈಲ್‌ಗೆ ಮೂರು ತಲಾಖ್‌ನ ವಾಟ್ಸಾಪ್‌ ಸಂದೇಶ ಕಳುಹಿಸಿದ್ದಾರೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!