ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಸಾವನ್ನಪ್ಪಿದ ಘಟನೆ ನಡೆದಿದೆ.
ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿಯಾಗಿದ್ದು, ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು.
ಔಷಧಿಗೆಂದು ಅವರು ಇಂದು ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂತ್ ಅಧ್ಯಕ್ಷ ದೇವದಾಸ ಶೆಟ್ಟಿ ಸಹಿತ ಅನೇಕ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…