ಕರಾವಳಿ

ರಾತ್ರಿ 10 ಗಂಟೆಗೆ ಮೊದಲು ಗಣೇಶೋತ್ಸವದ ಮೆರವಣಿಗೆ ಮುಕ್ತಾಯಗೊಳಿಸಿ; ಸಬ್ ಇನ್ಸ್‌ ಪೆಕ್ಟರ್‌ ಆಂಜನೇಯ ರೆಡ್ಡಿ

ಪುತ್ತೂರು: ಸಾರ್ವಜನಿಕ ಗಣೇಶೋತ್ಸವಗಳನ್ನು ನಡೆಸುವ ಸಂದರ್ಭದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತ ಗಣೇಶೋತ್ಸವ ನಡೆಸಲು ಆಯಾ ಸಮಿತಿಯರು ಜವಾಬ್ದಾರಿ ವಹಿಸಬೇಕು ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ ಪೆಕ್ಟರ್‌ ಆಂಜನೇಯ ರೆಡ್ಡಿ ಹೇಳಿದರು.

ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಗಣೇಶೋತ್ಸವ ನಡೆಸುವ ಕಡೆಗಳಲ್ಲಿ ಬೆಂಕಿ ನಂದಿಸುವ ವ್ಯವಸ್ಥೆ ಇರಬೇಕು. ಪೆಂಡಾಲ್ ಸುರಕ್ಷತೆಯೊಂದಿಗೆ ಸಮರ್ಪಕ ಬೆಳಕಿನ ವ್ಯವಸ್ಥೆ, ಜನರೇಟರ್ ವ್ಯವಸ್ಥೆ ಇರಬೇಕು. ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಹೇಳಿದರು.

ಈ ಬಾರಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನೇರವಾಗಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದಲೇ ನೇರ ಸೂಚನೆಗಳು ಬಂದಿವೆ. ರಾತ್ರಿ 10 ಗಂಟೆಗೆ ಮೊದಲು ಗಣೇಶೋತ್ಸವದ ಮೆರವಣಿಗೆ ಮುಕ್ತಾಯವಾಗಬೇಕು. ರಾತ್ರಿ10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ಅವಧಿಯಲ್ಲಿ ಸೌಂಡ್ ಬಳಕೆಯಾಗದಂತೆ ಸರ್ವೋಚ್ಛ ನ್ಯಾಯಾಲಯದ ನಿಯಮವನ್ನು ಪಾಲಿಸಬೇಕು ಎಂದು ಹೇಳಿದರು.

ಆದಷ್ಟು ಡಿಜೆಗಳನ್ನು ಬಳಸಬೇಡಿ. ಇಡೀ ರಾಜ್ಯದಲ್ಲಿಯೇ ದ.ಕ. ಜಿಲ್ಲೆಯಲ್ಲಿ ರೀತಿ-ನೀತಿ, ಕಾನೂನುಗಳನ್ನು ಪಾಲಿಸುವ ಜನರಿದ್ದಾರೆ. ಆಡಂಬರಕ್ಕಿಂತ ಭಕ್ತಿ, ಪ್ರೀತಿಯಿಂದ ದೇವರ ಸೇವೆ ಮಾಡಿದರೆ ಅದರ ಫಲವೂ ಲಭಿಸುತ್ತದೆ. ಈ ಕಾರಣದಿಂದ ನಿಯಮಗಳ ಪಾಲನೆಯೊಂದಿಗೆ ಶಾಂತಿಯುತ ಗಣೇಶೋತ್ಸವ, ಮೆರವಣಿಗೆಗೆ ಆದ್ಯತೆ ನೀಡಬೇಕು ಎಂದು ಆಂಜನೇಯ ರೆಡ್ಡಿ ವಿನಂತಿಸಿದರು.

ಸಬ್ ಇನ್ಸ್‌ ಪೆಕ್ಟರ್‌ ಸೇಸಮ್ಮ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು. ನಗರ ಠಾಣಾ ವ್ಯಾಪ್ತಿಯ 15 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ.

ನಗರ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಾದ ದೇವಾನಂದ ಕೆ., ಕುಮಾರನಾಥ್, ಕೇಶವ ಭಂಡಾರಿ, ರಾಧಾಕೃಷ್ಣ ನಂದಿಲ, ರಾಜೇಶ್ ಬನ್ನೂರು, ಸುದೇಶ್ ಚಿಕ್ಕಪುತ್ತೂರು, ಯು.ಲೋಕೇಶ್ ಹೆಗ್ಡೆ, ಪಿ.ವಿ. ದಿನೇಶ್, ಪ್ರಕಾಶ್, ಎಚ್. ಉದಯ ಮೊದಲಾದವರು ಪಾಲ್ಗೊಂಡರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

1 day ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

1 day ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago