ಪುತ್ತೂರು: ಸಾರ್ವಜನಿಕ ಗಣೇಶೋತ್ಸವಗಳನ್ನು ನಡೆಸುವ ಸಂದರ್ಭದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತ ಗಣೇಶೋತ್ಸವ ನಡೆಸಲು ಆಯಾ ಸಮಿತಿಯರು ಜವಾಬ್ದಾರಿ ವಹಿಸಬೇಕು ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಂಜನೇಯ ರೆಡ್ಡಿ ಹೇಳಿದರು.
ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಗಣೇಶೋತ್ಸವ ನಡೆಸುವ ಕಡೆಗಳಲ್ಲಿ ಬೆಂಕಿ ನಂದಿಸುವ ವ್ಯವಸ್ಥೆ ಇರಬೇಕು. ಪೆಂಡಾಲ್ ಸುರಕ್ಷತೆಯೊಂದಿಗೆ ಸಮರ್ಪಕ ಬೆಳಕಿನ ವ್ಯವಸ್ಥೆ, ಜನರೇಟರ್ ವ್ಯವಸ್ಥೆ ಇರಬೇಕು. ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಹೇಳಿದರು.
ಈ ಬಾರಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನೇರವಾಗಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದಲೇ ನೇರ ಸೂಚನೆಗಳು ಬಂದಿವೆ. ರಾತ್ರಿ 10 ಗಂಟೆಗೆ ಮೊದಲು ಗಣೇಶೋತ್ಸವದ ಮೆರವಣಿಗೆ ಮುಕ್ತಾಯವಾಗಬೇಕು. ರಾತ್ರಿ10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ಅವಧಿಯಲ್ಲಿ ಸೌಂಡ್ ಬಳಕೆಯಾಗದಂತೆ ಸರ್ವೋಚ್ಛ ನ್ಯಾಯಾಲಯದ ನಿಯಮವನ್ನು ಪಾಲಿಸಬೇಕು ಎಂದು ಹೇಳಿದರು.
ಆದಷ್ಟು ಡಿಜೆಗಳನ್ನು ಬಳಸಬೇಡಿ. ಇಡೀ ರಾಜ್ಯದಲ್ಲಿಯೇ ದ.ಕ. ಜಿಲ್ಲೆಯಲ್ಲಿ ರೀತಿ-ನೀತಿ, ಕಾನೂನುಗಳನ್ನು ಪಾಲಿಸುವ ಜನರಿದ್ದಾರೆ. ಆಡಂಬರಕ್ಕಿಂತ ಭಕ್ತಿ, ಪ್ರೀತಿಯಿಂದ ದೇವರ ಸೇವೆ ಮಾಡಿದರೆ ಅದರ ಫಲವೂ ಲಭಿಸುತ್ತದೆ. ಈ ಕಾರಣದಿಂದ ನಿಯಮಗಳ ಪಾಲನೆಯೊಂದಿಗೆ ಶಾಂತಿಯುತ ಗಣೇಶೋತ್ಸವ, ಮೆರವಣಿಗೆಗೆ ಆದ್ಯತೆ ನೀಡಬೇಕು ಎಂದು ಆಂಜನೇಯ ರೆಡ್ಡಿ ವಿನಂತಿಸಿದರು.
ಸಬ್ ಇನ್ಸ್ ಪೆಕ್ಟರ್ ಸೇಸಮ್ಮ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು. ನಗರ ಠಾಣಾ ವ್ಯಾಪ್ತಿಯ 15 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ.
ನಗರ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಾದ ದೇವಾನಂದ ಕೆ., ಕುಮಾರನಾಥ್, ಕೇಶವ ಭಂಡಾರಿ, ರಾಧಾಕೃಷ್ಣ ನಂದಿಲ, ರಾಜೇಶ್ ಬನ್ನೂರು, ಸುದೇಶ್ ಚಿಕ್ಕಪುತ್ತೂರು, ಯು.ಲೋಕೇಶ್ ಹೆಗ್ಡೆ, ಪಿ.ವಿ. ದಿನೇಶ್, ಪ್ರಕಾಶ್, ಎಚ್. ಉದಯ ಮೊದಲಾದವರು ಪಾಲ್ಗೊಂಡರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…