ಪುತ್ತೂರು; ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ಟಿವಿ ಮಾದ್ಯಮದಲ್ಲಿ ಸಿಐಡಿ
ಧಾರವಾಹಿಯ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿರುವ ಮುಂಬಯಿಯಲ್ಲಿರುವ ಕಾರ್ಕಳ ಮೂಲದ ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಲನ ಚಿತ್ರವು ಸೆ. 22ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಯಾನಂದ ಶೆಟ್ಟಿಯವರು ಮಾತನಾಡಿ ‘ಯಾನ್ ಸೂಪರ್ ಸ್ಟಾರ್’ ಸಿನಿಮಾ ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರ, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್ ಸಹಿತ ಜಿಲ್ಲೆಯಾದ್ಯಂತ ಚಿತ್ರಮಂದಿರದಲ್ಲಿ ಸಿನಿಮಾ ತೆರೆ ಕಾಣಲಿದೆ. ತುಳು ಸಿನಿಮಾರಂಗಕ್ಕೆ ಯಾನ್ ಸೂಪರ್ ಸ್ಟಾರ್ ಮೂಲಕ ಒಂದು ಸದಭಿರುಚಿಯ ಚಿತ್ರ ಲಭಿಸಲಿದೆ. ಕುಟುಂಬ ಸಮೇತ ಸಿನಿಮಾ ವೀಕ್ಷಿಸ ಬಹುದಾಗಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಮುಂಬಯಿ, ಪೂನಾ ಮತ್ತಿತರ ಕಡೆಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿದೆ. ಬೆಂಗಳೂರು ಮತ್ತು ಗಲ್ಫ್ ದೇಶಗಳಲ್ಲೂ ಸಿನಿಮಾ ಬಿಡುಗಡೆಗೆ ತಯಾರಿ ನಡೆಯುತ್ತಿದೆ ಎಂದ ಅವರು ಹೊಸ ಜನರೇಶನ್‌ಗೆ ಉತ್ತಮ ಸಂದೇಶ ಕೊಡುವ ಚಿತ್ರವಾಗಿದ್ದು, ಕನ್ನಡ ಮತ್ತು ಹಿಂದಿಯಲ್ಲೂ ಈ ಚಿತ್ರ ತೆರೆಕಾಣಲಿದೆ ಎಂದು ಅವರು ಹೇಳಿದರು.
ಚಿತ್ರದಲ್ಲಿ ಪ್ರಮುಖವಾಗಿ ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್ ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ಕುಸೇಲ್ದರಸೆ ನವೀನ್ ಡಿ ಪಡೀಲ್, ನವರಸ ರಾಜೆ ಭೋಜರಾಜ ವಾಮಂಜೂರು, ಕಾಂತರ ಚಲನಚಿತ್ರದಲ್ಲಿ ಉತ್ತಮ ಪಾತ್ರ ನಿಭಾಯಿಸಿದ ಮಾನಸಿ ಸುಧೀರ್, ಅನುಷಾ, ಅಶೋಕ್ ಪಕ್ಕಳ, ಮಾಸ್ಟರ್ ಅತಿಶ್ ಶೆಟ್ಟಿ, ಮಾಸ್ಟರ್ ಅರುಷ್ ಯು ಪೂಜಾರಿ, ಕುಮಾರಿ ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.
ಸಂತೋಷ್ ಶೆಟ್ಟಿಯವರ ಕತೆಗೆ ಸಚಿನ್ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ. ಚಿತ್ರಕತೆಯನ್ನು ಅಂಕಣ ಜೋಷಿ, ಸಂತೋಷ್ ಶೆಟ್ಟಿ, ಸಾಹಿತ್ಯ ಹಾಡು, ಸಂಗೀತದಲ್ಲಿ ವಿ ಮನೋಹರ್, ಗುರುಕಿರಣ್ ಈ ಸಿನಿಮಾಕ್ಕೆ ಹಾಡು ಹಾಡಿದ್ದಾರೆ. ಹಿನ್ನಲೆ ಸಂಗೀತವನ್ನು ಸಂಜಯ್ ವಾಂದ್ರೇಕರ್, ಕ್ಯಾಮರಾದಲ್ಲಿ ಕೃಷ್ಣರಾಜ್ ಕೋಟ್ಯಾನ್, ಸಾಹಸದಲ್ಲಿ ಆನಂದ ಶೆಟ್ಟಿ, ಸಹ ನಿರ್ದೇಶನ ರಾಮ್ ದಾಸ್ ಸಸಿಹಿತ್ಲು, ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ಸತೀಶ್ ದುಬೈ, ಕ್ರಿಯೇಟಿವ್ ಡೈರಕ್ಟರ್ ಆಗಿ ಕ್ರಿಸ್ತಬೆಲ್ಲೆ ಡಿ ಸೋಜ, ಪ್ರೊಡಕ್ಷನ್ ಹೆಡ್ಡ್ : ಚಂದ್ರಕಾಂತ್ ಭಂಡಾರಿ, ನಿರ್ದೇಶನವನ್ನು ಸಂತೋಷ್ ಶೆಟ್ಟಿ ಮಾಡಿದ್ದಾರೆ.
ಇನ್ನೂ ಸುದ್ದಿಗೋಷ್ಠಿಯಲ್ಲಿ ಚಿತ್ರ ನಟ ಉದ್ಯಮಿ ಹರೀಶ್ ವಾಸು ಶೆಟ್ಟಿ, ನಿರ್ದೇಶಕ ಸಂತೋಷ್ ಶೆಟ್ಟಿ, ಚಿತ್ರದ ಕ್ಯಾಮರಮ್ಯಾನ್ ಕೃಷ್ಣರಾಜ್ ಕೋಟ್ಯಾನ್, ಚಲನಚಿತ್ರ ಹಂಚಿಕೆದಾರ ಬಾಲಕೃಷ್ಣ ರೈ ಕುಕ್ಕಾಡಿ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…