ಸಂಪ್ರದಾಯದಂತೆ ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕಾರಿಂಜ ದೇವಸ್ಥಾನದಿಂದ ಶ್ರೀ ದೇವರು ವಿವಿಧ ಕಟ್ಟೆಗಳಲ್ಲಿ ಪೂಜೆ ನಡೆದಿದೆ.
ಸುಮಾರು 9 ಕಿಮೀ ದೂರದ ಸರಪಾಡಿಯ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕ್ಷೇತ್ರಕ್ಕೆ ಕೊಂಡೊಯ್ಯಲಾಗಿದೆ. ಮುಂಜಾನೆ ಸೂರ್ಯೋದಯಕ್ಕೆ ಮುನ್ನಾ ಕಾರಿಂಜದಿಂದ ವಾದ್ಯ ವೃಂದ ಸಹಿತವಾಗಿ ಅರ್ಚಕರು, ತಂತ್ರಿಗಳು, ಗ್ರಾಮಣಿಗಳು, ಮುಖ್ಯಸ್ಥರು ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಶೇಡಿಮೆ ಕಟ್ಟೆ, ದಂಡ್ಯೊಟ್ಟು ಕಟ್ಟೆ, ದೇವಶ್ಯ ಕಟ್ಟೆ, ಸೂಳ್ದುಕ್ಕು ಕಟ್ಟೆ, ಭಂಡಾರಿಕಟ್ಟೆ, ಸಮಗಾರನ ಕಟ್ಟೆ ಹಾಗೂ ಹಲ್ಲಂಗಾರು ಕಟ್ಟೆಯಲ್ಲಿ ಹೀಗೆ 7 ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.
ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಕಂಬಳದ ಗದ್ದೆಯಿಂದ ತೆನೆಯನ್ನು ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ, ನಂತರ ಭಕ್ತರು ಅದನ್ನು ಪಡೆದು ಮನೆ ತುಂಬಿಸಿಕೊಂಡು, ಮನೆಯಲ್ಲಿ ಸಂಪ್ರದಾಯವಾಗಿ ಹೊಸ ಅಕ್ಕಿ ಊಟವನ್ನು ಮಾಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…