ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಪೋಲೀಸರು ಭರ್ಜರಿ ಬೇಟೆಯಾಡಿ ,ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರ ಬಂಧಿಸಿ ,ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಮಂಗಳೂರು,ಬೆಂಗ್ರೆ ಭದ್ರಪಳ್ಳಿ, ಮಸೀದಿ ಬಳಿ, ಕಸಬಾ ಬೇಂದ್ರೆ ನಿವಾಸಿ ಮಹಮ್ಮದ್ ಆಯುಬು ಅವರ ಮಗ ಫರಾಜ್ (27 ) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು, ಕೃಷ್ಣಪುರ 8- 36 ಸೈಟ್ ನಂ 37, 4ನೇ ಬ್ಲಾಕ್ ನಿವಾಸಿ ಅಬ್ಬಾಸ್ ಅವರ ಮಗ
ತೌಸಿಫ್ ಅಹಮ್ಮದ್ (34) ಬಂಧಿತ ಆರೋಪಿಗಳು.
ಆರೋಪಿಗಳಿಂದ ಒಟ್ಟು ರೂ. 12,23,000/- ಮೌಲ್ಯದ 223ಗ್ರಾಂ ಚಿನ್ನಾಭರಣ ಮತ್ತು ರೂ 3000/- ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000/- ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 1556000/- ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್‌ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರ್‌ನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ , ಗೋಡ್ರೆಜ್‌ಗಳ ಬಾಗಿಲುಗಳನ್ನು ಮುರಿದು ಒಟ್ಟು 115 ಗ್ರಾಂ ತೂಕದ ಸುಮಾರು 5,36,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000/- ರೂಪಾಯಿ ಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು.
ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕಳವಾದ ಸೊತ್ತುಗಳನ್ನು ಪತ್ತೆಮಾಡಿಕೊಡಬೇಕಾಗಿ ಕೋರಿ ಮೈಕಲ್ ಡಿಸೋಜಾ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ನಿರ್ದೇಶನದಂತೆ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದಲ್ಲಿ ಎಸ್.ಐ.ರಾಮಕೃಷ್ಣ ಅವರ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ಕೆಲವೊಂದು ಸಂಶಯಗಳ ಮೇಲೆ ಕಳ್ಳರ ಜಾಲನ್ನು ಹಿಡಿದು ರಾಮಕೃಷ್ಣ ಅವರ ತಂಡ ಕಳ್ಳರ ಪತ್ತೆಗಾಗಿ ಅವಿರತವಾದ ಶ್ರಮವಹಿಸಿ ಕೊನೆಗೂ ಕಳವು ಆರೋಪಿಗಳ ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳರು ತನಿಖೆಯ ವೇಳೆ ಬಾಯಿಬಿಟ್ಟಂತೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಪೈಕಿ ಫರಾಜ್ ಎಂಬಾತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 279/2015 ಕಲಂ : 380 ಐ.ಪಿ.ಸಿಯಂತೆ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 21/2021 ಕಲಂ : 454, 457, 380 ಐ.ಪಿ.ಸಿ ಯಂತೆ ಮನೆಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಎಸ್.ಪಿ. ಸಿ.ಬಿ ರಿಷ್ಯಂತ್, ಹೆಚ್ಚುವರಿ ಎಸ್.ಪಿ. ಧರ್ಮಪ್ಪ ಎನ್. ಎಂ. ಡಿ.ವೈ.ಎಸ್.ಪಿ. ಪ್ರತಾಪ್ ಸಿಂಗ್ ಥೋರಾಟ್ ನಿರ್ದೇಶನದಂತೆ ಪೋಲಿಸ್ ಇನ್ಸ್ ಪೆಕ್ಟರ್ ನಾಗರಾಜ್ ಹೆಚ್.ಇ.ಅವರ ನೇತ್ರತ್ವದಲ್ಲಿ ಬಂಟ್ವಾಳ ನಗರ ಠಾಣೆಯ ಎಸ್.ಐ.ರಾಮಕೃಷ್ಣ ಅಪರಾಧ ವಿಭಾಗದ ಎಸ್.ಐ ಕಲೈಮಾರ್, ಎ.ಎಸ್.ಐ ನಾರಾಯಣ, ಹೆಡ್ ಕಾನ್‌ಸ್ಟೇಬಲ್‌ಗಳಾದ ಇರ್ಷಾದ್ ಪಿ. ರಾಜೇಶ್, ಮನೋಹರ, ಕಾನ್‌ಸ್ಟೇಬಲ್‌ಗಳಾದ ಉಮೇಶ್ ಹಿರೇಮಠ, ರಂಗನಾಥ್ ಆರೋಪಿ ಹಾಗೂ ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ ಹಾಗೂ ಜಿಲ್ಲಾ ಗಣಕಯಂತ್ರ ಕೇಂದ್ರದ ದಿವಾಕರ ಮತ್ತು ಸಂಪತ್‌ರವರು ಆರೋಪಿ ಪತ್ತೆ ಬಗ್ಗೆ ಸಹಕರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯವನ್ನು ಜಿಲ್ಲಾ ಎಸ್.ಪಿ.ಸಿ.ಬಿ.ರಿಷ್ಯಂತ್ ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…