ಜನ ಮನದ ನಾಡಿ ಮಿಡಿತ

Advertisement

ಬಂಟರ ಮಾತೃ ಸಂಘದ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ; ಸಾರ್ವಜನಿಕರಿಗೆ ತೆನೆ ವಿತರಣೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ‌ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.


ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ ಜೈರಾಜ್ ಬಿ ರೈ ಮತ್ತು ಸೌಮ್ಯ ಜೆ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜವನ್ನು ಒಂದುಗೂಡಿಸಲು ಇಂತಹ ಸಾರ್ವಜನಿಕ ಗಣೇಶೋತ್ಸವ ಪ್ರೇರಣೆಯಾಗುತ್ತದೆ ಎಂದರು. ಅಜಿತ್ ಕುಮಾರ್ ರೈ ಮಾಲಾಡಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದೆಲ್ಲವೂ ಕಾರ್ಯಗತಗೊಳ್ಳಲಿ ಎಂದವರು ತಿಳಿಸಿದರು.‌


ಶ್ರೀ ವೈಷ್ಣವಿ ದುರ್ಗಾ ದೇವಸ್ಥಾನ ದಶರಥ ನಗರ ಮಣಿಪಾಲದ ಆಡಳಿತ ಮೊಕ್ತೇಸರ ಬಿ ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ ಹೆಗ್ಡೆ ತೆನೆ ವಿತರಿಸಿದರು. ಈಎಸ್ ಎಂ ಸಬ್ ಮೇಜರ್ ಶಶಿಧರ ಆಳ್ವ ಧ್ವಜಾರೋಹಣಗೈದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಒಂದು ಕ್ರೀಯಾಶೀಲ ತಂಡವು ಕೆಲಸ ಮಾಡುತ್ತಿದೆ. ಇದರಿಂದ ಸಮಾರಂಭವು ಯಶಸ್ವಿಯಾಗುತ್ತಿದೆ ಎಂದು ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.


ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ ನಾಗರಾಜ ಶೆಟ್ಟಿ, ಬಿ ಶೇಖರ ಶೆಟ್ಟಿ, ಸುಧಾಕರ ಎಸ್ ಪೂಂಜ, , ವಸಂತ ಶೆಟ್ಟಿ, ಶರ್ಮಿಳಾ ಎಸ್ ಆಳ್ವ, ಭಾರತಿ ಜಿ ಶೆಟ್ಟಿ, ಅರುಣಾ ಎಸ್ ಶೆಟ್ಟಿ, ಆಶಾ ಜ್ಯೋತಿ ರೈ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು. ಮಂಗಳೂರು ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿದರು. ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಕವಿತಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!